ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂದೋಲಾ ಕರುಣೇಶ್ವರ ಮಠದ ಸ್ವಾಮೀಜಿ ಬಂಧನ

Last Updated 30 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಕಲಬುರ್ಗಿ: ಮುಸ್ಲಿಂ ಯುವಕನ ಮೇಲೆ ಹಲ್ಲೆ ಮಾಡಲು ಕುಮ್ಮಕ್ಕು ನೀಡಿದ ಆರೋಪದ ಮೇಲೆ ಶ್ರೀರಾಮ ಸೇನೆಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಹಾಗೂ ಜೇವರ್ಗಿ ತಾಲ್ಲೂಕು ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ ಸಿದ್ದಲಿಂಗ ಸ್ವಾಮೀಜಿ ಅವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

‘ಜಾತ್ರಾ ಮಹೋತ್ಸವ ವಿಷಯವಾಗಿ ಸ್ವಾಮೀಜಿ ಗ್ರಾಮಸ್ಥರೊಂದಿಗೆ ಸಭೆ ನಡೆಸುತ್ತಿದ್ದರು. ಆ ವೇಳೆ ಬಂಧಿಸಲು ತೆರಳಿದಾಗ ಭಕ್ತರು, ಗ್ರಾಮಸ್ಥರು ಅಡ್ಡಿಪಡಿಸಿದರು. ಆಗ ಸ್ವಾಮೀಜಿ ಎಲ್ಲರನ್ನೂ ಸಮಾಧಾನ ಪಡಿಸಿದರು. ಬಳಿಕ ಅವರನ್ನು ಬಂಧಿಸಲಾಯಿತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಂದೋಲಾ ಗ್ರಾಮದ ಮುಸ್ಲಿಂ ಯುವಕನ ಮೇಲೆ ಈಚೆಗೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ಯುವಕನ ಮೇಲೆ ನಡೆದ ಹಲ್ಲೆಗೆ ಕುಮ್ಮಕ್ಕು ನೀಡಿರುವ ಸ್ವಾಮೀಜಿ ಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಈಚೆಗೆ ಜೇವರ್ಗಿಯಿಂದ ಆಂದೋಲಾ ಚಲೋ ಹಮ್ಮಿಕೊಂಡಿದ್ದರು. ಈ ವೇಳೆ ಪೊಲೀಸರು 250 ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದ್ದರು.

ಜೇವರ್ಗಿ ಪಟ್ಟಣದಲ್ಲಿ ಶ್ರೀರಾಮ ಸೇನೆ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ
ರಿಂದ ಇವರ ಮೇಲೆ ಪ್ರಕರಣ ದಾಖಲಾಗಿತ್ತು. ಸ್ವಾಮೀಜಿ ಜಾಮೀನು ಪಡೆದುಕೊಂಡಿದ್ದರು. ರಾಘವೇಶ್ವರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ಅ. 29ರಂದು ಇಲ್ಲಿ ನಡೆದ ಖಂಡನಾ ಸಭೆಯಲ್ಲಿ ಸಿದ್ದಲಿಂಗ ಸ್ವಾಮೀಜಿ ಅವರನ್ನು ಬಂಧಿಸಿದರೆ ರಾಜ್ಯದಾದ್ಯಂತ ಹೋರಾಟ ಮಾಡುವ ನಿರ್ಣಯ ಕೈಗೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT