ಕೆಪಿಎಸ್‌ಸಿಗೆ ನಾಲ್ವರ ನೇಮಕ

ಬುಧವಾರ, ಜೂನ್ 19, 2019
28 °C

ಕೆಪಿಎಸ್‌ಸಿಗೆ ನಾಲ್ವರ ನೇಮಕ

Published:
Updated:
ಕೆಪಿಎಸ್‌ಸಿಗೆ ನಾಲ್ವರ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ಕೆ.ಸಿ. ಜನರಲ್‌ ಆಸ್ಪತ್ರೆಯ ಸೂಪರಿಂಟೆಂಡೆಂಟ್‌ ಡಾ.ಎಚ್‌. ರವಿಕುಮಾರ್ ಸೇರಿದಂತೆ ನಾಲ್ವರನ್ನು ಕರ್ನಾಟಕ ಲೋಕ ಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಸದಸ್ಯರನ್ನಾಗಿ ನೇಮಕ ಮಾಡುವ ಶಿಫಾರಸಿಗೆ ಕೊನೆಗೂ ರಾಜ್ಯಪಾಲ ವಜುಭಾಯಿ ವಾಲಾ ಒಪ್ಪಿಗೆ ನೀಡಿದ್ದಾರೆ.

ಸುತ್ತೂರು ಶಿವರಾತ್ರೀಶ್ವರಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರ, ಮುಜರಾಯಿ ಇಲಾಖೆಯ ಆಯುಕ್ತ ಷಡಕ್ಷರಿ ಸ್ವಾಮಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಡಾ.ಆರ್‌. ಲಕ್ಷ್ಮೀನಾರಾಯಣ ಮತ್ತು ರಾಯಚೂರಿನ ವಕೀಲ ಶ್ರೀಕಾಂತ್‌ ರಾವ್ ಇನ್ನುಳಿದ ಸದಸ್ಯರು. ಕೆಪಿಎಸ್‌ಸಿಯಲ್ಲಿ ಅಧ್ಯಕ್ಷರು ಸೇರಿ ಒಟ್ಟು 14 ಸದಸ್ಯರು ಇರಬೇಕು. ಖಾಲಿ ಇದ್ದ ನಾಲ್ಕು ಸ್ಥಾನಗಳನ್ನು ಇದೀಗ ಭರ್ತಿ ಮಾಡಲಾಗಿದೆ.

ಈ ನಾಲ್ವರ ಹೆಸರನ್ನು ಶಿಫಾರಸು ಮಾಡಿ ರಾಜ್ಯ ಸರ್ಕಾರ ಕಳುಹಿಸಿದ್ದ ಕಡತವನ್ನು ರಾಜ್ಯಪಾಲರು ಕಳೆದ ಆಗಸ್ಟ್‌ನಲ್ಲಿ ವಾಪಸು ಕಳುಹಿಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry