ಶ್ರವಣದೋಷ ಶಸ್ತ್ರಚಿಕಿತ್ಸೆ ಯಶಸ್ವಿ

ಭಾನುವಾರ, ಜೂನ್ 16, 2019
22 °C

ಶ್ರವಣದೋಷ ಶಸ್ತ್ರಚಿಕಿತ್ಸೆ ಯಶಸ್ವಿ

Published:
Updated:
ಶ್ರವಣದೋಷ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಂಗಳೂರು: ಅತಿಕಿವುಡುತನ ಸಮಸ್ಯೆಗೆ (ಪ್ರಫೌಂಡ್ ಬೈಲ್ಯಾಕಲ್ ಸೆನ್ಸರಿ ನ್ಯೂರಲ್ ಹಿಯರಿಂಗ್ ಲಾಸ್) ‘ವೆರಿಯಾ’ ಶಸ್ತ್ರಚಿಕಿತ್ಸೆ ಪಡೆದು ಗುಣಮುಖ ಹೊಂದಿರುವ 75 ಮಕ್ಕಳು, ಅವರ ಪೋಷಕರು ಹಾಗೂ ವೈದ್ಯರ ಸಮಾಗಮ ಭಗವಾನ್‌ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ಸೋಮವಾರ ನಡೆಯಿತು.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ‘ಈ ಕಾಯಿಲೆಗೆ ರಾಜ್ಯದಲ್ಲಿ ಮಾನಸ ಕಾಕ್ಲಿಯರ್‌ ಇಂಪ್ಲಾಂಟ್‌ ಮತ್ತು ಇಎನ್‌ಟಿ ಸೆಂಟರ್‍ ಚಿಕಿತ್ಸೆಯನ್ನು ಪರಿಚಯಿಸಿತ್ತು. ಇದಕ್ಕೆ ಸುಮಾರು ₹ 7 ಲಕ್ಷ ವೆಚ್ಚವಾಗುತ್ತಿತ್ತು. ಆರೋಗ್ಯ ಸಚಿವನಾಗಿದ್ದಾಗ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹ 5 ಲಕ್ಷ ಪರಿಹಾರ ನೀಡುವ ಯೋಜನೆ ಆರಂಭಿಸಲಾಗಿತ್ತು. 75 ಮಕ್ಕಳಿಗೆ ದೇಶದಲ್ಲಿಯೇ ಮೊದಲ ಬಾರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿರುವ ವೈದ್ಯರ ಪ್ರಯತ್ನ ಶ್ಲಾಘನೀಯ’ ಎಂದರು.

ಮಾನಸ ಕಾಕ್ಲಿಯರ್‌ ಇಂಪ್ಲಾಂಟ್‌ ಮತ್ತು ಇಎನ್‌ಟಿ ಸೆಂಟರ್‌ ಮುಖ್ಯಸ್ಥೆ ವಾಸಂತಿ ಆನಂದ್, ಇಂತಹ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನಮ್ಮ ಕೇಂದ್ರದ ಸಹಯೋಗದಲ್ಲಿ ಗ್ರೀಸ್‍ನ ವೈದ್ಯ ಡಾ. ಟ್ರಿಪಾನ್‌ ‘ವೆರಿಯಾ’ ತಂತ್ರಜ್ಞಾನದ ಶಸ್ತ್ರಚಿಕಿತ್ಸೆ ಕಂಡುಹಿಡಿದಿದ್ದಾರೆ ಎಂದರು.

ಕಾಕ್ಲಿಯರ್‌ ಇಂಪ್ಲಾಂಟ್‌ ಸರ್ಜನ್‌ ಪ್ರೊ. ಜೆ.ಎಂ.ಹನ್ಸ್, ‘8ರಿಂದ 12 ವರ್ಷದೊಳಗಿನ ಮಕ್ಕಳಲ್ಲಿ ಈ ಸಮಸ್ಯೆ ಹೆಚ್ಚು ಕಂಡುಬರುತ್ತಿದೆ. 1,000 ಮಕ್ಕಳಲ್ಲಿ 50 ಮಕ್ಕಳು ಇಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry