ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ರಾಜ್ಯ ಧ್ವಜಾರೋಹಣ: 50ಕ್ಕೂ ಹೆಚ್ಚು ಜನರ ಬಂಧನ

Last Updated 1 ನವೆಂಬರ್ 2017, 5:52 IST
ಅಕ್ಷರ ಗಾತ್ರ

ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಪ್ರತ್ಯೇಕ ಧ್ವಜಾರೋಹಣ ನೆರವೇರಿಸಲು ಮುಂದಾದ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಕಾರ್ಯಕರ್ತರು ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ‌ ನಡೆಸಿದರು. 

'ರಾಜ್ಯ ಸರ್ಕಾರ ಹೈದರಾಬಾದ್ ಕರ್ನಾಟಕವನ್ನು ಕಡೆಗಣಿಸುತ್ತಿದೆ. ಈ ಭಾಗಕ್ಕೆ 371(ಜೆ) ಸ್ಥಾನಮಾನ ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ಈ ಭಾಗದ ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡಬೇಕು' ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT