ಗುರುವಾರ , ಫೆಬ್ರವರಿ 25, 2021
17 °C

ಏಕೀಕರಣ ಹೋರಾಟ: ಸಂಸ್ಥಾನಿಕರು ಮೊದಲಿಗರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಏಕೀಕರಣ ಹೋರಾಟ: ಸಂಸ್ಥಾನಿಕರು ಮೊದಲಿಗರು

ಜಮಖಂಡಿ: ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದವರಲ್ಲಿ ಜಮಖಂಡಿಯ ಪಟವರ್ಧನ ಸಂಸ್ಥಾನಿಕರು ಮೊದಲಿಗರು. ಕುಡಚಿ–ಬಾಗಲಕೋಟೆ ರೈಲ್ವೆ ಮಾರ್ಗ ನಿರ್ಮಾಣಕ್ಕಾಗಿ ಬ್ರಿಟಿಷ್‌ ಸರ್ಕಾರವೇ ಸಮೀಕ್ಷೆ ಕೈಗೊಂಡಿತ್ತು. ಅದರಲ್ಲಿ ಪಟವರ್ಧನ ಸಂಸ್ಥಾನಿಕರ ಪಾತ್ರ ಇರಲಿಲ್ಲ ಎಂದು ಶಾಸಕ ಸಿದ್ದು ನ್ಯಾಮಗೌಡ ಅಭಿಪ್ರಾಯಪಟ್ಟರು.

ನಗರದ ಹೊಕ್ಕಳಬಾವಿ ಮೈದಾನದಲ್ಲಿ ಕನ್ನಡ ಸಂಘ ಹಾಗೂ ತಾಲ್ಲೂಕು ಆಡಳಿತದ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಕನ್ನಡ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

50 ವರ್ಷಗಳ ಇತಿಹಾಸದಲ್ಲಿ ರಾಜ್ಯ, ಅಂತರರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ, ಕಬಡ್ಡಿ ಹಾಗೂ ಸೈಕ್ಲಿಂಗ್‌ ಟೂರ್ನಿಗಳನ್ನು ಆಯೋಜಿಸಿದ ಹೆಮ್ಮೆ ಸ್ಥಳೀಯ ಕನ್ನಡ ಸಂಘಕ್ಕೆ ಇದೆ ಎಂದರು.

ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ಮಾತನಾಡಿ, ಮುಂಬರುವ ದಿನಗಳಲ್ಲಿ ನಗರದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಅವಕಾಶ ನೀಡಲು ಶಾಸಕರ ನೇತೃತ್ವದಲ್ಲಿ ಈ ಭಾಗದ ಜನಪ್ರತಿನಿಧಿಗಳು, ಸಾಹಿತಿಗಳು ಸಾಹಿತ್ಯ ಪರಿಷತ್ತಿನ ರಾಜ್ಯ ಹಾಗೂ ಕೇಂದ್ರ ಸಮಿತಿ ಪದಾಧಿಕಾರಿಗಳ ಮೇಲೆ ಒತ್ತಡ ಹೇರಬೇಕು. ನಗರದಲ್ಲಿ ಕನ್ನಡ ಭವನ ನಿರ್ಮಾಣದ ಬಹುದಿನಗಳ ಬೇಡಿಕೆಯನ್ನು ಈಡೇರಿಸಬೇಕು ಎಂದರು.

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಜಿ.ಎಸ್‌. ನ್ಯಾಮಗೌಡ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿದರು. ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಕನ್ನಡ ಧ್ವಜಾರೋಹಣ ನೆರವೇರಿಸಿದರು.

ಭುವನೇಶ್ವರಿದೇವಿ ಭಾವಚಿತ್ರದ ಭವ್ಯ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಆನೆಯ ಮೇಲೆ ಜರುಗಿತು. ನವಿಲು ಕುಣಿತ ಕಲಾವಿದರು, ಶಾಲಾ ಮಕ್ಕಳು, ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.