ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅತ್ಯಂತ ಶ್ರೀಮಂತ ಭಾಷೆ ಕನ್ನಡ’

Last Updated 2 ನವೆಂಬರ್ 2017, 6:18 IST
ಅಕ್ಷರ ಗಾತ್ರ

ಮುಧೋಳ: ‘ಅತ್ಯಂತ ಶ್ರೀಮಂತ ಹಾಗೂ ಪ್ರಾಚೀನ ಭಾಷೆಯಾದ ಕನ್ನಡ ಅಜರಾಮರ ಹಾಗೂ ಶಾಶ್ವತ ಭಾಷೆಯಾಗಿದೆ. ಹಿಂದೆ, ಇಂದು ಹಾಗೂ ಮುಂದೆಯೂ ಇರುತ್ತದೆ’ ಎಂದು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಹೇಳಿದರು.

ತಾಲ್ಲೂಕು ಆಡಳಿತದಿಂದ ನಗರದ ನೂತನ ಬಾಲಕಿಯರ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ರಂಗದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮಾಡಿ ಅವರು ಮಾತನಾಡಿದರು.

ನಿವೃತ್ತ ಉಪನ್ಯಾಸಕ ಎಸ್.ಬಿ.ಕೃಷ್ಣೇಗೌಡರ ಮಾತನಾಡಿದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ತಿಮ್ಮಣ್ಣ ಬಟಕುರ್ಕಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರಸಭೆ ಅಧ್ಯಕ್ಷೆ ದಾಕ್ಷಾಯಣಿ ಹಲಸಂಗಿಮಠ, ತಹಶೀಲ್ದಾರ್ ಡಿ.ಜಿ.ಮಹಾತ್, ತಾ.ಪಂ ಇಓ ಬಿ.ವಿ.ಅಡವಿಮಠ, ವೀಣಾ ದೇಸಾಯಿ, ಕಸಾಪ ಅಧ್ಯಕ್ಷ ಸಂಗಮೇಶ ನೀಲಗುಂದ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ ನಿಡೋಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT