ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಂಚಾಹಾರ್‌ ಬಾಯ್ಲರ್ ಸ್ಫೋಟ: ಸಾವಿನ ಸಂಖ್ಯೆ 26ಕ್ಕೆ ಏರಿಕೆ

ರಾಹುಲ್‌ ಗಾಂಧಿ ಭೇಟಿ
Last Updated 2 ನವೆಂಬರ್ 2017, 7:08 IST
ಅಕ್ಷರ ಗಾತ್ರ

ಲಖನೌ: ರಾಯಬರೇಲಿ ಜಿಲ್ಲೆಯ ಉಂಚಾಹಾರ್‌ನ ರಾಷ್ಟ್ರೀಯ ಶಾಖೋತ್ಪನ್ನ ನಿಗಮದ (ಎನ್‌ಟಿಪಿಸಿ) ಸ್ಥಾವರದಲ್ಲಿ ಬುಧವಾರ ಸಂಭವಿಸಿದ್ದ ಬಾಯ್ಲರ್‌ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿದೆ.

ಘಟನೆಯಲ್ಲಿ 64 ಜನರು ಗಾಯಗೊಂಡಿದ್ದಾರೆ ಎಂದು ರಾಯಬರೇಲಿ ಜಿಲ್ಲಾಧಿಕಾರಿ ಸಂಜಯ್ ಕುಮಾರ್‌ ಖತ್ರಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತಪಟ್ಟವರಿಗೆ ₹ 2 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹ 50 ಸಾವಿರ ಹಾಗೂ ಸಾಧಾರಣ ಗಾಯಾಳುಗಳಿಗೆ ₹ 25 ಸಾವಿರ ಪರಿಹಾರ ಘೋಷಿಸಿದ್ದಾರೆ.

ರಾಹುಲ್‌ ಗಾಂಧಿ ಭೇಟಿ
ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ರಾಯಬರೇಲಿ ಜಿಲ್ಲಾ ಆಸ್ಪತ್ರೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಗುರುವಾರ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT