ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ಮಡ ಸಂಸ್ಕೃತಿ ಎಲ್ಲ ರಾಜ್ಯಗಳಿಗೂ ಮಾದರಿ’

Last Updated 2 ನವೆಂಬರ್ 2017, 8:42 IST
ಅಕ್ಷರ ಗಾತ್ರ

ನರಗುಂದ: ‘ಕನ್ನಡ ನಾಡು, ನುಡಿ ಬೆಳವಣಿಗೆಗೆ ಸಾಕಷ್ಟು ಜನ ಶ್ರಮಿಸಿದ್ದಾರೆ. ಅವರ ತ್ಯಾಗ ಸ್ಮರಣೀಯ. ಕನ್ನಡ ಸಂಸ್ಕೃತಿ, ಸಾಹಿತ್ಯ ಎಲ್ಲ ರಾಜ್ಯಗಳಿಗೂ ಮಾದರಿ’ ಎಂದು ಶಾಸಕ ಬಿ.ಆರ್‌.ಯಾವಗಲ್‌ ಹೇಳಿದರು.

ಪಟ್ಟಣದಲ್ಲಿ ಬುಧವಾರ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕನ್ನಡಿಗರು ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಭಾಷೆ ಉಳಿವಿಗೆ ಶ್ರಮಿಸಬೇಕು’ ಎಂದರು.

ಸುದರ್ಶನ ಅಂಬೇಕರ ಉಪನ್ಯಾಸ ನೀಡಿದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಪ್ರಕಾಶಗೌಡ ತಿರಕನಗೌಡ್ರ, ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ, ಪುರಸಭೆ ಅಧ್ಯಕ್ಷ ಪ್ರಕಾಶ ಪಟ್ಟಣಶೆಟ್ಟಿ, ಜಿಲ್ಲಾ ಪಂಚಾಯ್ತಿ ಸದಸ್ಯ ರಾಜುಗೌಡ ಕೆಂಚನಗೌಡ್ರ, ರೇಣುಕಾ ಅವರಾದಿ, ಎ.ಪಿ.ಎಂ.ಸಿ ಅಧ್ಯಕ್ಷ ಎನ್‌.ವಿ.ಮೇಟಿ, ಪುರಸಭೆ ಅಧ್ಯಕ್ಷ ಪ್ರಕಾಶ ಪಟ್ಟಣಶೆಟ್ಟಿ, ಅಜ್ಜು ಪಾಟೀಲ, ಮಂಜು ಮೆಣಸಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT