ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ದಿನ ಅತ್ಯಾಚಾರಕ್ಕೊಳಗಾಗುತ್ತಿವೆ ಕನಿಷ್ಠ ಮೂರು ಮಕ್ಕಳು!

Last Updated 3 ನವೆಂಬರ್ 2017, 7:00 IST
ಅಕ್ಷರ ಗಾತ್ರ

ನವದೆಹಲಿ: ದೇಶದ ರಾಜಧಾನಿಯಲ್ಲಿ ಪ್ರತಿದಿನವೂ ಕನಿಷ್ಠ ಮೂರು ಮಕ್ಕಳು ಅತ್ಯಾಚಾರ ದೌರ್ಜನ್ಯಕ್ಕೆ ಒಳಗಾಗುತ್ತಿದ್ದು, ಇದು ಮಕ್ಕಳ ಸುರಕ್ಷತೆ ಬಗೆಗಿನ ಕಳವಳವನ್ನು ಹೆಚ್ಚಿಸಿದೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯ ಪ್ರಕಾರ 2015 ಇಲ್ಲಿ ಒಟ್ಟು 927ಮಕ್ಕಳು ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಅಂದರೆ ಪ್ರತಿ ದಿನ ಸರಾಸರಿ 2.5 ಮಕ್ಕಳ ಮೇಲೆ ದೌರ್ಜನ್ಯವೆಸಗಲಾಗಿದೆ. 2014ರಲ್ಲಿ 1,004 ಮಕ್ಕಳು ಅತ್ಯಾಚಾರಕ್ಕೆ ಒಳಗಾಗಿದ್ದವು.

ಇಲ್ಲಿನ ಅಮನ್‌ ವಿಹಾರ್‌ ಪ್ರದೇಶದಲ್ಲಿ ಬುಧವಾರ 18 ತಿಂಗಳಿನ ಮಗುವನ್ನು ಪಕ್ಕದ ಮನೆಯ 33 ವರ್ಷದ ದುಷ್ಕರ್ಮಿ ಅಪಹರಿಸಿ ಲೌಗಿಂಕ ದೌರ್ಜನ್ಯವೆಸಗಿದ ಪ್ರಕರಣ ಬೆಳಕಿಗೆ ಬಂದಿತ್ತು.

ಈ ಕುರಿತು ಮಾತನಾಡಿರುವ ವಕೀಲ ಅನಂತ್‌ ಕುಮಾರ್‌ ಅಸ್ತಾನ ಅವರು, ಅತಿಯಾದ ವಲಸೆ ಕಂಡುಬರುವ ದೆಹಲಿಯ ಹೊರವಲಯ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಈ ಸಮಸ್ಯೆ ಹೆಚ್ಚಾಗಿದೆ ಎಂದು ಹೇಳುತ್ತಾರೆ.

‘ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಬಳಿ ಬಿಟ್ಟು ಕೆಲಸಗಳಿಗಾಗಿ ನಗರಗಳತ್ತ ತೆರಳುತ್ತಾರೆ. ಸ್ವಂತ ಪೋಷಕರು ಅಜಾಗರೂಕರಾಗಿರುವುದು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಲು ಕಾರಣ’ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸಮಾಜದಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯಗಳಾಗಬೇಕು ಎಂದು ಮಕ್ಕಳ ಹಕ್ಕು ಪರ ಸಂಘಟನೆಗಳು ಆಗ್ರಹಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT