ಮೊಬೈಲ್ ತಂತ್ರಾಂಶದಿಂದ ಬೆಳೆ ಸಮೀಕ್ಷೆ

ಟೇಕಲ್: ‘ಮೊಬೈಲ್ ತಂತ್ರಾಂಶ ಬಳಸಿ ರೈತರ ಎಲ್ಲ ಬೆಳೆಗಳ ಸಮೀಕ್ಷೆ ಮಾಡಿ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ರೈತ ಸಂಪರ್ಕ ಕೇಂದ್ರದ (ಪ್ರಭಾರ) ಕೃಷಿ ಅಧಿಕಾರಿ ಪ್ರಕಾಶ್‌ಬಾಬು ಹೇಳಿದರು.
ಹೋಬಳಿ ವ್ಯಾಪ್ತಿಯ ಹಳ್ಳಿಗಳಲ್ಲಿ ಗುರುವಾರ ಬೆಳೆಗಳ ಸಮೀಕ್ಷೆ ನಡೆಸಿ ಮಾತನಾಡಿ, ‘ಪಹಣಿಯಲ್ಲಿ ಬೆಳೆಗಳ ಮಾಹಿತಿ ಕರಾರುವಕ್ಕಾಗಿ ಇಲ್ಲದ ಕಾರಣ ರೈತರು ಸರ್ಕಾರಿ ಯೋಜನೆಗಳ ಸೌಕರ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಪಹಣಿಯಲ್ಲಿನ ತಾಂತ್ರಿಕ ದೋಷ ನಿವಾರಣೆಗಾಗಿ ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.
ಕೃಷಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಸಮೀಕ್ಷೆ ಉತ್ತೇಜಕರು, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಅಧಿಕಾರಿಗಳು ನಿತ್ಯ ಬೆಳಿಗ್ಗೆ 6 ಗಂಟೆಗೆ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆ ನಡೆಸುತ್ತಾರೆ. ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಪೋಟೊ ತೆಗೆಯಲು ಪೋಟೊ ತೆಗೆಯಲು ರೈತರು ಅಧಿಕಾರಿಗಳಿಗೆ ಸಹಕರಿಸಬೇಕು. ಜತೆಗೆ ಆಧಾರ್ ಹಾಗೂ ಮೊಬೈಲ್ ಸಂಖ್ಯೆ ನೀಡಬೇಕು ಎಂದರು.
ಬೆಳೆ ಸಮೀಕ್ಷೆಯಿಂದ ರೈತರಿಗೆ ಭವಿಷ್ಯದಲ್ಲಿ ಬೆಳೆ ನಷ್ಟ ಪರಿಹಾರ ಪಡೆಯಲು ಅನುಕೂಲವಾಗುತ್ತದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನಗಳನ್ನು ಖರೀದಿಸಲು ಸಹಾಯವಾಗುತ್ತದೆ. ಪಟ್ಟಿಯಲ್ಲಿ ರೈತರ ಹೆಸರು ಬಿಟ್ಟು ಹೋಗಿದ್ದರೆ ಸೇರಿಸಬೇಕು ಎಂದು ಸಲಹೆ ನೀಡಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.