ಭಾನುವಾರ, ಮಾರ್ಚ್ 7, 2021
20 °C

ಹಳೆ ನೋಟು ವಿನಿಮಯ ಅವಕಾಶ: ಸಂವಿಧಾನ ಪೀಠಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಹಳೆ ನೋಟು ವಿನಿಮಯ ಅವಕಾಶ: ಸಂವಿಧಾನ ಪೀಠಕ್ಕೆ

ನವದೆಹಲಿ: ಚಲಾವಣೆಯಿಂದ ರದ್ದಾದ ₹500 ಮತ್ತು ₹1000 ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಮತ್ತೊಂದು ಅವಕಾಶ ಕಲ್ಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ವರ್ಗಾಯಿಸಿದೆ.

ಕೇಂದ್ರ ಸರ್ಕಾರದ ನೋಟು ರದ್ದತಿ ನಿರ್ಧಾರದ ಕ್ರಮಬದ್ಧತೆಯನ್ನು ನಿರ್ಣಯಿಸಲಿರುವ ಸಂವಿಧಾನ ಪೀಠವೇ ಈ ಪ್ರಕರಣವನ್ನೂ ನಿರ್ಧರಿಸಲಿದೆ.

ಹಳೆಯ ನೋಟುಗಳನ್ನು ಬದಲಾಯಿಸಿಕೊಳ್ಳಲಾಗದೆ ಸಮಯಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದವರ ವಿರುದ್ಧ ಕ್ರಿಮಿನಲ್‌ ಕ್ರಮ ಕೈಗೊಳ್ಳುವುದಿಲ್ಲ ಎಂದು ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ಅವರು ಭರವಸೆ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.