ಗುರುವಾರ , ಫೆಬ್ರವರಿ 25, 2021
30 °C

ಮಂಗಳೂರು ವಿಮಾನ ನಿಲ್ದಾಣದಲ್ಲಿ ₹34.17 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ವಶ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಮಂಗಳೂರು ವಿಮಾನ ನಿಲ್ದಾಣದಲ್ಲಿ ₹34.17 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ವಶ

ಮಂಗಳೂರು: ಇಲ್ಲಿನ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ₹34.17 ಲಕ್ಷ ಮೌಲ್ಯದ 10 ಚಿನ್ನದ ಗಟ್ಟಿಗಳನ್ನು ಆದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಸ್ಪೈಸ್‌ಜೆಟ್‌ SG60 ವಿಮಾನದಲ್ಲಿ ದುಬೈನಿಂದ ಬಂದ ಪ್ರಯಾಣಿಕರು ಅಕ್ರಮ ಚಿನ್ನವನ್ನ ತಂದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಚಿನ್ನದ ಗಟ್ಟಿಗಳಿದ್ದ ಚೀಲ ಶೌಚಾಲಯ ಸ್ವಚ್ಛಗೊಳಿಸುವ ಸಿಬ್ಬಂದಿಗೆ ಕಾಣಿಸಿದೆ. ಅನುಮಾನಗೊಂಡ ಅವರು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಮಂಗಳೂರು ಘಟಕದ ಡಿಆರ್‌ಐ ಅಧಿಕಾರಿಗಳು ಶೌಚಾಲಯದಲ್ಲಿ ತಪಾಸಣೆ ನಡೆಸಿ ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆದಿದ್ದಾರೆ.

ಒಟ್ಟು 1116.5ಗ್ರಾಂ(1 ಕೆಜಿಗೂ ಹೆಚ್ಚು) ತೂಕದ ₹34.17ಲಕ್ಷ ಮೌಲ್ಯದ 24ಕ್ಯಾರೆಟ್‌ ಶುದ್ಧ ಚಿನ್ನವನ್ನು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.