ಗುರುವಾರ , ಫೆಬ್ರವರಿ 25, 2021
29 °C

ಸರ್ಕಾರಿ ಶಾಲೆಯಲ್ಲಿ ಫುಟ್ಬಾಲ್ ಕ್ರೀಡಾಂಗಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರಿ ಶಾಲೆಯಲ್ಲಿ ಫುಟ್ಬಾಲ್ ಕ್ರೀಡಾಂಗಣ

ಬೆಂಗಳೂರು: ಬೊಮ್ಮನಹಳ್ಳಿ ಪ್ರದೇಶದ ಬಂಡೇಪಾಳ್ಯದ ಸರ್ಕಾರಿ ಶಾಲಾ ಆವರಣದಲ್ಲಿ ಸುಸಜ್ಜಿತ ಫುಟ್ ಬಾಲ್ ಮತ್ತು ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಗೊಂಡಿದೆ. ಇಎಸ್‌ಪಿಎನ್, ಲವ್ ಫುಟ್‌ಬಾಲ್ ಮತ್ತು ಮ್ಯಾಜಿಕ್ ಬಸ್ ಸಂಸ್ಥೆಗಳ ಸಹಯೋಗದಲ್ಲಿ ಈ ಕ್ರೀಡಾಂಗಣನಿರ್ಮಿಸಲಾಗಿದೆ.

ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದನ್ನು ಬಳಸಬಹುದು. ಒಂದೇ ಕ್ರೀಡಾಂಗಣದಲ್ಲಿ ಕ್ರಿಕೆಟ್, ಬಾಸ್ಕೆಟ್ ಬಾಲ್ ಮತ್ತು ಫುಟ್‌ಬಾಲ್ ಆಟವಾಡುವ ವ್ಯವಸ್ಥೆ ಇದೆ. ಫುಟ್‌ಬಾಲ್ ಮತ್ತು ಬಾಸ್ಕೆಟ್ ಬಾಲ್ ಆಟಕ್ಕೆ ಸಿಂಥೆಟಿಕ್ ಮ್ಯಾಟ್ ಹಾಕಲಾಗಿದೆ. ಕ್ರಿಕೆಟ್ ಆಡುವಾಗ ಇದನ್ನು ತೆಗೆದು ಆಡಬಹುದಾಗಿದೆ. ಸುಮಾರು ₹50 ಲಕ್ಷ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಿಸಲಾಗಿದೆ.

ಅಂತರರಾಷ್ಟ್ರೀಯ ಮಾಜಿ ಅಥ್ಲೀಟ್ ಅಶ್ವಿನಿ ನಾಚಪ್ಪ, ‘ಸರ್ಕಾರಿ ಶಾಲೆಯೊಂದರಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣ ಮಾಡಿರುವುದು ಖುಷಿಯ ವಿಚಾರ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಕ್ರೀಡೆಯಲ್ಲಿ ದೊಡ್ಡ ಸಾಧನೆ ಮಾಡುವಂತಾಗಬೇಕು’ ಎಂದರು.

‘ಕ್ರೀಡಾ ಪರಿಕರಗಳನ್ನೂ ಸಂಸ್ಥೆಗಳೇ ಉಚಿತವಾಗಿ ನೀಡಿವೆ. ಲವ್ ಫುಟ್‌ಬಾಲ್ ಸಂಸ್ಥೆ ಸದಸ್ಯರು ವಿದ್ಯಾರ್ಥಿಗಳಿಗೆ ಉಚಿತ ತರಬೇತಿಯನ್ನೂ ನೀಡುತ್ತಿದ್ದಾರೆ’ ಎಂದು ಶಾಲೆ ಮುಖ್ಯೋಪಾದ್ಯಾಯಿನಿ ಕಮಲಮ್ಮ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.