ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನ.7ರಿಂದ ಮೈಸೂರಿನಲ್ಲಿ ಕುಮಾರಪರ್ವ ಆರಂಭ’

Last Updated 5 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಮೈಸೂರು: ನಗರದ ಲಿಂಗದೇವರಕೊಪ್ಪಲಿನ ಮೈದಾನದಲ್ಲಿ ನ.7ರಂದು ಬೆಳಿಗ್ಗೆ 11 ಗಂಟೆಗೆ ಜೆಡಿಎಸ್‌ ಶಕ್ತಿ ಪ್ರದರ್ಶನದ ‘ಕುಮಾರಪರ್ವ–2018’ ಕಾರ್ಯಕ್ರಮ ಆರಂಭಗೊಳ್ಳಲಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದಾಗಿ ಭವಿಷ್ಯ ಹೇಳಿದ್ದೆ. ಆಗ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಪ್ರಚಾರ ಕಾರ್ಯ ಆರಂಭವಾಗಿತ್ತು. ನಂತರ ಅವರು ಮುಖ್ಯಮಂತ್ರಿಯಾದರು. ಈಗಲೂ ಈ ಕ್ಷೇತ್ರದಿಂದಲೇ ಪ್ರಚಾರ ಕಾರ್ಯಕ್ರಮ ಆರಂಭಗೊಳ್ಳುತ್ತಿದೆ. ಜೆಡಿಎಸ್‌
ಹೆಚ್ಚಿನ ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಅಂತೆಯೇ, ಕುಮಾರಸ್ವಾಮಿಯೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ಭಾನುವಾರ ಸುದ್ದಿ ಗೋಷ್ಠಿಯಲ್ಲಿ ಹೇಳಿದರು.

ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರ ಸ್ವಾಮಿ, ಮುಖಂಡರಾದ ಬಸವರಾಜ ಹೊರಟ್ಟಿ, ಬಂಡೆಪ್ಪ ಕಾಶಂಪುರ , ಮಧು ಬಂಗಾರಪ್ಪ ಸೇರಿದಂತೆ ರಾಜ್ಯಮಟ್ಟದ ಹಲ ವಾರು ಮುಖಂಡರು ಈ ಶಕ್ತಿ ಪ್ರದರ್ಶನದಲ್ಲಿ ಭಾಗವಹಿಸುತ್ತಾರೆ. ಇದಕ್ಕೂ ಮುನ್ನ ಚಾಮುಂಡೇಶ್ವರಿ ಕ್ಷೇತ್ರದ ಹಲವು ಭಾಗಗಳಲ್ಲಿ ‘ಕರ್ನಾಟಕ ವಿಕಾಸ ರಥ’ ಮೆರವಣಿಗೆ ನಡೆಯಲಿದೆ ಎಂದು ದೇವೆಗೌಡ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT