ಶುಕ್ರವಾರ, ಮಾರ್ಚ್ 5, 2021
21 °C

ಕಾಮಗಾರಿ ನನೆಗುದಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಮಗಾರಿ ನನೆಗುದಿಗೆ

ಹುಳಿಯಾರು: ಹೋಬಳಿಯ ಗಾಣಧಾಳು ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿ ನನೆಗುದಿಗೆ ಬಿದ್ದಿದೆ ಎಂದು ಕೆಲ ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾಗಿದ್ದರೂ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವಾಗಿರಲಿಲ್ಲ.

ಗಾಣಧಾಳು ಸೇರಿದಂತೆ ಸುತ್ತಮುತ್ತಲ ಜನರು ಇದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರುವಾಪುರ ಅಥವಾ ಮೇಲನಹಳ್ಳಿ ಗ್ರಾಮದಿಂದ ಶುದ್ಧ ಕುಡಿಯುವ ನೀರನ್ನು ತರುವ ಸ್ಥಿತಿಯಿತ್ತು. ಇದನ್ನು ತಪ್ಪಿಸಲು ಕಳೆದ ಒಂದೂವರೇ ವರ್ಷದ ಹಿಂದೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಚಾಲನೆ ದೊರೆಯಿತಾದರೂ ಕಾಮಗಾರಿ ಕುಂಟುತ್ತಾ ಸಾಗಿ ನನೆಗುದಿಗೆ ಬಿದ್ದಿದೆ ಎಂದು ಗ್ರಾಮದ ಜಿ.ಜೆ.ಚರಿತ್‌ಕುಮಾರ್ ದೂರಿದ್ದಾರೆ.

ಈಗಾಗಲೇ ಘಟಕದ ಕಟ್ಟಡ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಶುದ್ಧೀಕರಣ ಯಂತ್ರವೂ ಬಂದಿದೆ. ಆದರೆ ಕಾಮಗಾರಿ ಮಾತ್ರ ನಡೆಯದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಕಾಮಗಾರಿಗೆ ಚಾಲನೆ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.