ಮಂಗಳವಾರ, ಮಾರ್ಚ್ 2, 2021
26 °C

ಜೆಡಿಎಸ್‌ನತ್ತ ರವೀಂದ್ರ ಶ್ರೀಕಂಠಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೆಡಿಎಸ್‌ನತ್ತ ರವೀಂದ್ರ ಶ್ರೀಕಂಠಯ್ಯ

ಮಂಡ್ಯ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರವು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಹಾಲಿ ಶಾಸಕ ಜೆಡಿಎಸ್‌ನಿಂದ ಬಂಡಾಯ ಎದ್ದಿರುವ ರಮೇಶ್‌ ಬಂಡಿ ಸಿದ್ದೇಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದು ಖಾತರಿಯಾಗುತ್ತಿದ್ದಂತೆ, ಜೆಡಿಎಸ್ ವಲಯದಲ್ಲಿ ಚುರುಕಿನ ವಿದ್ಯಮಾನಗಳು ನಡೆದಿವೆ.

ಕಾಂಗ್ರೆಸ್‌ ತೊರೆದಿರುವ ಮುಖಂಡ ರವೀಂದ್ರ ಶ್ರೀಕಂಠಯ್ಯ ಅವರು ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್‌.ಎಂ.ಕೃಷ್ಣ ಅವರು ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದಾಗ ಅವರ ಜತೆ ಪಕ್ಷಕ್ಕೆ ರಾಜೀನಾಮೆ ನೀಡಿ ತಟಸ್ಥರಾಗಿ ಉಳಿದಿದ್ದ ರವೀಂದ್ರ ಅವರ ನಿವಾಸಕ್ಕೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.