3

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Published:
Updated:
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಚಾಮರಾಜನಗರ: ತಾಲೂಕಿನ ವಡ್ಗಲ್‍ಪುರ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಇತ್ತೀಚೆಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮದ ಅಂಗನವಾಡಿ ಕೇಂದ್ರದ ಮುಂಭಾಗದಿಂದ ಮುಖ್ಯ ರಸ್ತೆಯವರೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಜಿಲ್ಲಾ ಪಂಚಾಯಿತಿಯ ₹ 4 ಲಕ್ಷ ಹಾಗೂ ಶಾಸಕರ ನಿಧಿಯ ₹ 5ಲಕ್ಷ ಅನುದಾನದಡಿ ಡಾಂಬರೀಕರಣ ಮಾಡಲಾಗುತ್ತಿದೆ ಎಂದರು.

ಕ್ಷೇತ್ರ ವ್ಯಾಪ್ತಿಯ ಎಲ್ಲ ರಸ್ತೆಯನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲಾಗುವುದು. ಈಗಾಗಲೇ, ಹಲವೆಡೆ ರಸ್ತೆಗಳು ಪೂರ್ಣಗೊಂಡಿದ್ದು, ಕೆಲವು ಕಡೆಗಳಲ್ಲಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಯಾವುದೇ ಗ್ರಾಮ ಅಭಿವೃದ್ಧಿ ಹೊಂದಬೇಕಾದರೆ, ಅಲ್ಲಿರುವ ಮೂಲ ಸೌಕರ್ಯವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಹಾಗಾಗಿ, ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಾಗುವುದು ಎಂದರು.

ಬಳಿಕ, ಅವರು ಅಮಚವಾಡಿಯಿಂದ ಲಕ್ಷ್ಮಿಪುರ ಗ್ರಾಮಕ್ಕೆ ಹೋಗುವ ರಸ್ತೆ, ಚರಂಡಿ ಹಾಗೂ ಸೇತುವೆ ಕಾಮಗಾರಿಗಳನ್ನು ಪರಿಶೀಲಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ, ಮುಖಂಡರಾದ ಶಂಭಪ್ಪ, ದ್ವಾರಸ್ವಾಮಿ ಪ್ರಸಾದ್, ಎ.ಎಸ್. ಗುರುಸ್ವಾಮಿ, ಮಲ್ಲಜಮ್ಮ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry