ಸೋಮವಾರ, ಮಾರ್ಚ್ 8, 2021
22 °C

ಮುಗುಳುವಳ್ಳಿ: ಎಚ್‌ಡಿಕೆ ಗ್ರಾಮ ವಾಸ್ತವ್ಯ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಗುಳುವಳ್ಳಿ: ಎಚ್‌ಡಿಕೆ ಗ್ರಾಮ ವಾಸ್ತವ್ಯ ಇಂದು

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಗುಳುವಳ್ಳಿಯಲ್ಲಿ ಜೆಡಿಎಸ್ ರಾಜ್ಯಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಇದೇ 7ರಂದು ಗ್ರಾಮವಾಸ್ತವ್ಯ ಹೂಡಲಿದ್ದಾರೆ.

ಕುಮಾರಸ್ವಾಮಿ ಅವರು ಸಂಜೆ 6.30ಕ್ಕೆ ನಗರದ ಆಜಾದ್‌ ಪಾಕ್‌ ವೃತ್ತದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡುವರು. ಈ ಕಾರ್ಯಕ್ರಮದ ನಂತರ ಅವರು ಚಿಕ್ಕಮಗಳೂರು ತಾಲ್ಲೂಕಿನ ಮುಗುಳವಳ್ಳಿ ಗ್ರಾಮಕ್ಕೆ ತೆರಳುವರು. ಅಲ್ಲಿ ಸಭೆ ನಡೆಸಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸುವರು. ದಲಿತ ಧರ್ಮಪಾಲ ಅವರ ಮನೆಯಲ್ಲಿ ವಾಸ್ತವ್ಯ ಹೂಡುವರು ಎಂದು ಜೆಡಿಎಸ್‌ ಪ್ರಕಟಣೆ ತಿಳಿಸಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗ್ರಾಮ ವಾಸ್ತವ್ಯ ಇಂದು

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್ ಅವರು ಮೂಡಿಗೆರೆ ತಾಲ್ಲೂಕಿನ ಕಳಸ ಹೋಬಳಿ, ಜೋಗಿಕುಂಬ್ರಿ ಗ್ರಾಮದಲ್ಲಿ ಇದೇ 7ರಂದು ಗ್ರಾಮ ವಾಸ್ತವ್ಯ ಹೂಡುವರು. ಜನಸಂಪರ್ಕ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.