7

ಕೊಡಗಿನಲ್ಲಿ ಧಾರಾಕಾರ ಮಳೆ

Published:
Updated:

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಧಾರಾಕಾರ ಮಳೆ ಸುರಿಯಿತು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ಮಡಿಕೇರಿಯಲ್ಲಿ ಒಂದು ತಾಸು ಗುಡುಗು ಸಹಿತ ಮಳೆ ಆರ್ಭಟಿಸಿತು.

ನಾಪೋಕ್ಲು, ಭಾಗಮಂಡಲ, ತಲಕಾವೇರಿ, ಸಿದ್ದಾಪುರ, ನೆಲ್ಯಹುದಿಕೇರಿ, ಚೆಟ್ಟಳ್ಳಿ, ಸುಂಟಿಕೊಪ್ಪ ವ್ಯಾಪ್ತಿಯಲ್ಲೂ ಮಳೆ ಸುರಿದಿದೆ. ಜಿಲ್ಲೆಯ ಕೆಲವು ಕಡೆ ಕಾಫಿ ಕೊಯ್ಲು ಆರಂಭವಾಗಿದ್ದು ಮಳೆ ಅಡ್ಡಿಪಡಿಸಿತು. ಇದೇ ರೀತಿ ಮಳೆ ಮುಂದುವರಿದರೆ ಕಾಫಿ ಹಣ್ಣು ಉದುರಿ ನಷ್ಟ ಉಂಟಾಗಲಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry