ಭಾನುವಾರ, ಫೆಬ್ರವರಿ 28, 2021
23 °C

ಟಿಪ್ಪು ಜಯಂತಿ: 127 ಜನರಿಂದ ಭದ್ರತಾ ಬಾಂಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟಿಪ್ಪು ಜಯಂತಿ: 127 ಜನರಿಂದ ಭದ್ರತಾ ಬಾಂಡ್

ಮಂಗಳೂರು: ಟಿಪ್ಪು ಸುಲ್ತಾನ್ ಜಯಂತಿ ಹಾಗೂ ಬಿಜೆಪಿಯ ಪರಿವರ್ತನಾ ಯಾತ್ರೆ ಸಮಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ 127 ಕೋಮು ಗೂಂಡಾಗಳಿಂದ ಭದ್ರತಾ ಬಾಂಡ್‌ ಪಡೆಯಲಾಗಿದೆ ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್‌ ಪಂತ್ ತಿಳಿಸಿದರು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬುಧವಾರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಡಿದರು.

ಜಿಲ್ಲೆಯಲ್ಲಿ ಭದ್ರತಾ ಕಾರ್ಯಕ್ಕೆ 2,000 ಪೊಲೀಸರು, ರಾಜ್ಯ ಮೀಸಲು ಪೊಲೀಸ್ ಪಡೆಯ 13 ತುಕಡಿ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಯ ಒಂದು ಕಂಪನಿ ನಿಯೋಜಿಸಲಾಗಿದೆ ಎಂದರು.

ಬಿಜೆಪಿಯ ಪರಿವರ್ತನಾ ಸಮಾವೇಶಗಳಿಗೆ ಅನುಮತಿ ಕೋರಿರುವ ಅರ್ಜಿಗಳ ಪರಿಶೀಲನೆ ನಡೆದಿದೆ. ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಕುರಿತು ಪರಿಸ್ಥಿತಿ ಆಧರಿಸಿ ಸ್ಥಳೀಯ ಅಧಿಕಾರಿಗಳು ತೀರ್ಮಾನಿಸುತ್ತಾರೆ ಎಂದು ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.