ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಪ್ಪು ಜಯಂತಿ: ಕೊಡಗಿನಲ್ಲಿ ನಿಷೇಧಾಜ್ಞೆ

Last Updated 8 ನವೆಂಬರ್ 2017, 14:39 IST
ಅಕ್ಷರ ಗಾತ್ರ

ಮಡಿಕೇರಿ: ಟಿಪ್ಪು ಜಯಂತಿ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನ. 9ರ ಬೆಳಿಗ್ಗೆ 6ರಿಂದ 11ರ ಬೆಳಿಗ್ಗೆ 6ರವರೆಗೆ ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಿತ ಅವಧಿಯಲ್ಲಿ ಗುಂಪು ಸೇರುವಂತಿಲ್ಲ. ಯಾವುದೇ ರೀತಿಯ ಆಯುಧ ಹಿಡಿದು ಸಂಚರಿಸುವಂತಿಲ್ಲ. ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆಯಲ್ಲಿ ಶುಕ್ರವಾರ ಸರ್ಕಾರಿ ಕಾರ್ಯಕ್ರಮ ನಡೆಯಲಿದ್ದು, ಆ ಸ್ಥಳದಲ್ಲಿ ಬೆಳಿಗ್ಗೆ 9.30ರಿಂದ 11.30ರವರೆಗೆ ಮಾತ್ರ ನಿಷೇಧಾಜ್ಞೆ ಅನ್ವಯಿಸುವುದಿಲ್ಲ.

ಕುಶಾಲನಗರದ ಗುಂಡೂರಾವ್‌ ಬಡಾವಣೆಯ ಗಣಪತಿ ದೇವಸ್ಥಾನದ ಜಾತ್ರೆ ಹಾಗೂ ಗೋವು ಪ್ರದರ್ಶನ ಹೊರತು ಪಡಿಸಿ ಜಿಲ್ಲೆಯಾದ್ಯಂತ ಎಲ್ಲ ಜಾತ್ರೆ ಹಾಗೂ ಸಂತೆಗಳನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ರಿಚರ್ಡ್‌ ವಿನ್ಸೆಂಟ್‌ ಡಿಸೋಜ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT