ಮೂರು ಚಿರತೆ ಮರಿ ಪತ್ತೆ

ಕೆ.ಆರ್.ಪೇಟೆ: ತಾಲ್ಲೂಕಿನ ಕಳ್ಳನಕೆರೆ ಗ್ರಾಮದಲ್ಲಿ ಗುರುವಾರ ಕಬ್ಬು ಕಟಾವು ಮಾಡುತ್ತಿದ್ದಾಗ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.
ಗ್ರಾಮದ ರೈತ ದೇವರಾಜು ಅವರು ಜಮೀನಿನಲ್ಲಿ ಕಬ್ಬು ಕಟಾವು ಮಾಡಿಸುತ್ತಿದ್ದಾಗ ಒಂದರಿಂದ ಒಂದೂವರೆ ತಿಂಗಳ ಚಿರತೆ ಮರಿಗಳು ಕಂಡು ಬಂದವು. ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಮರಿಗಳನ್ನು ವಶಕ್ಕೆ ತೆಗೆದುಕೊಂಡರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.