ಗುರುವಾರ , ಫೆಬ್ರವರಿ 25, 2021
29 °C

ಚಿಕ್ಕಬಳ್ಳಾಪುರ: ಶಾಂತಿಯುತವಾಗಿ ನಡೆದ ಟಿಪ್ಪು ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಶಾಂತಿಯುತವಾಗಿ ನಡೆದ ಟಿಪ್ಪು ಜಯಂತಿ

ಚಿಕ್ಕಬಳ್ಳಾಪುರ: ನಗರದಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಶಾಸಕ ಡಾ.ಕೆ.ಸುಧಾಕರ್ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್.ಅನುರಾಧಾ ಭಾಗವಹಿಸಿದರು.

ಚಿಂತಾಮಣಿಯಲ್ಲಿ ಜೆಡಿಎಸ್‌ ಶಾಸಕ ಎಂ. ಕೃಷ್ಣಾರೆಡ್ಡಿ ಮತ್ತು ಬೆಂಬಲಿಗರು ಟಿಪ್ಪು ಜಯಂತಿಗೆ ಬಹಿಷ್ಕಾರ ಹಾಕಿದ್ದು ಹೊರತುಪಡಿಸಿದಂತೆ ಜಿಲ್ಲೆಯಲ್ಲಿ ಶುಕ್ರವಾರ ಟಿಪ್ಪು ಜಯಂತಿ ಶಾಂತಿಯುತವಾಗಿ ನಡೆಯಿತು.

ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ವಿಧಿಸಿರುವ ಷರತ್ತುಗಳ ವಿರೋಧಿಸಿದ ಜೆಡಿಎಸ್‌ ಮುಖಂಡರು, ಎಲ್ಲಾ ಜಯಂತಿಯಂತೆ ಈ ಜಯಂತಿಯಲ್ಲಿ ಕೂಡ ಅದ್ದೂರಿಯಾಗಿ ಮೆರವಣಿಗೆ ಆಯೋಜಿಸಬೇಕಿತ್ತು ಎಂದು ಒತ್ತಾಯಿಸಿದರು. ಚಿಂತಾಮಣಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಕೃಷ್ಣಾರೆಡ್ಡಿ ಭಾಗವಹಿಸಲಿಲ್ಲ.

ಜಿಲ್ಲೆಯಲ್ಲಿ ಚಿಂತಾಮಣಿ ಹೊರತುಪಡಿಸಿದಂತೆ ಉಳಿದ ತಾಲ್ಲೂಕುಗಳಲ್ಲಿ ಮೊದಲಿನಿಂದಲೂ ಕೋಮು ಸೌಹಾರ್ದ ವಾತಾವರಣವಿದ್ದು, ಶುಕ್ರವಾರ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.