ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ್ದಕ್ಕೆ ಸ್ವ ಇಚ್ಛೆಯಿಂದ ದಂಡ ಕಟ್ಟಿದ ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ: ಇತ್ತೀಚೆಗೆ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿ ಆಕ್ಷೇಪಕ್ಕೆ ಗುರಿಯಾಗಿದ್ದ ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಅವರು ಇದೀಗ ಸ್ವ ಇಚ್ಛೆಯಿಂದ ದಂಡ ಕಟ್ಟಿದ್ದಾರೆ.
ಬ್ರಹ್ಮಾವರದ ಕರ್ಜೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಕಾರ್ಯಕರ್ತರೊಬ್ಬರ ಬೈಕ್ ಓಡಿಸಿದ್ದರು. ಆದರೆ ಹೆಲ್ಮೆಟ್ ಧರಿಸಿರಲಿಲ್ಲ. ಈ ಬಗ್ಗೆ ಸಾಮಾಜಿಕ ಮಾದ್ಯಮಗಳಲ್ಲಿ ಚರ್ಚೆ ನಡೆದಿತ್ತು. ಸಚಿವರೇ ನಿಯಮ ಪಾಲಿಸದಿದ್ದರೆ ಹೇಗೆ ಎಂದು ಹಲವರು ಪ್ರಶ್ನಿಸಿದ್ದರು. ಈ ವಿಷಯ ಗೊತ್ತಾದ ನಂತರ ಪ್ರಮೋದ್ ಅವರು ದಂಡದ ಮೊತ್ತ ₹ 100 ಪಾವತಿಸಿದ್ದಾರೆ.
ಈ ವಿಷಯವನ್ನು ಎಸ್ಪಿ ಡಾ. ಸಂಜೀವ್ ಪಾಟೀಲ್ ಅವರು ಖಚಿತಪಡಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.