ಶುಕ್ರವಾರ, ಮಾರ್ಚ್ 5, 2021
17 °C

ಮಧ್ಯಪ್ರದೇಶ: ಚಿತ್ರಕೂಟ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಮಧ್ಯಪ್ರದೇಶ: ಚಿತ್ರಕೂಟ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯ

ಭೋಪಾಲ್: ಚಿತ್ರಕೂಟ ವಿಧಾನಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಿಲಾಂಶು ಚತುರ್ವೇದಿ ಅವರು ಬಿಜೆಪಿಯ ಶಂಕರ್ ದಯಾಳ್ ತ್ರಿಪಾಠಿ ವಿರುದ್ಧ 14,333 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ಚತುರ್ವೇದಿ ಒಟ್ಟು 66,810 ಮತಗಳನ್ನು ಗಳಿಸಿದ್ದರೆ, ತ್ರಿಪಾಠಿಗೆ 52,677 ಮತಗಳು ದೊರೆತಿವೆ. ನವೆಂಬರ್‌ 9ರಂದು ನಡೆದಿದ್ದ ಉಪಚುನಾವಣೆಯಲ್ಲಿ ಶೇ. 65ರಷ್ಟು ಮತದಾನವಾಗಿತ್ತು.

2013ರ ವಿಧಾನಸಭೆ ಚುನಾವಣೆಯಲ್ಲೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರೇಮ್‌ ಸಿಂಗ್ ಜಯಗಳಿಸಿದ್ದರು. ಅವರ ನಿಧನದಿಂದಾಗಿ ಸ್ಥಾನ ತೆರವಾಗಿತ್ತು. 2013ರ ಚುನಾವಣೆಯಲ್ಲಿ ಪ್ರೇಮ್‌ ಸಿಂಗ್ ಅವರು 10,970 ಮತಗಳ ಅಂತರದಿಂದ ಜಯಗಳಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.