ಭಾನುವಾರ, ಮಾರ್ಚ್ 7, 2021
28 °C

‘ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೆ ರಾಜಕಾರಣಕ್ಕೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೆ ರಾಜಕಾರಣಕ್ಕೆ’

ಕಾರವಾರ: ಕಾರವಾರ–ಅಂಕೋಲಾ ಕ್ಷೇತ್ರದ ಅಭಿವೃದ್ಧಿಗಾಗಿ, ತಾವು ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುವುದಾಗಿ ಮಾಜಿ ಸಚಿವ ಆನಂದ ಅಸ್ನೋಟಿಕರ್‌ ಭಾನುವಾರ ಇಲ್ಲಿ ಪ್ರಕಟಿಸಿದರು.= ರಾಜಕೀಯ ಮರುಪ್ರವೇಶಕ್ಕೆ ಒತ್ತಾಯಿಸಿ ಅವರ ಮನೆ ಮುಂದೆ ನೆರೆದಿದ್ದ ನೂರಾರು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದೇ 15ರ ನಂತರ ಕ್ಷೇತ್ರದಲ್ಲಿ ಸಂಚರಿಸಿ, ಹಿರಿಯರ ಅಭಿಪ್ರಾಯ ಪಡೆದು ಮುಂದಡಿ ಇಡುವುದಾಗಿ ತಿಳಿಸಿದರು.

ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬುದನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸುವುದಾಗಿ ಹೇಳಿದರು. ‘ನಾಲ್ಕೂವರೆ ವರ್ಷಗಳಿಂದ ಪಕ್ಷದ ಹಾಗೂ ಯಾವ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ನಾನು ಕಾಣಿಸಿಕೊಂಡಿರಲಿಲ್ಲ.

ನನ್ನ ಅವಧಿಯಲ್ಲಿ ಹಲವಾರು ಜನಪರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಮುಂದಿನ ಚುನಾವಣೆಗೆ ಸ್ಪರ್ಧಿಸಲು, ಅಭಿಮಾನಿಗಳನ್ನು ಎದುರಿಸಲು ಧೈರ್ಯ ಇರಲಿಲ್ಲ. ಆದರೆ ಈ ಜನಸಾಗರವನ್ನು ನೋಡಿ ಈಗ ಧೈರ್ಯ ಬರುತ್ತಿದೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.