ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹರಕ್ಷಕಿಯಿಂದ ಮಸಾಜ್‌ ಮಾಡಿಸಿಕೊಳ್ಳುತ್ತಿರುವ ಪೊಲೀಸ್‌ ಇನ್ಸ್‌ಪೆಕ್ಟರ್‌ !

Last Updated 14 ನವೆಂಬರ್ 2017, 6:17 IST
ಅಕ್ಷರ ಗಾತ್ರ
ADVERTISEMENT

ಹೈದರಾಬಾದ್‌: ತೆಲಂಗಾಣ ರಾಜ್ಯದ ಗಡ್ವಾಲ್‌ ನಗರದ ಸಶಸ್ತ್ರ ಮೀಸಲು ಪಡೆಯ (ಎಆರ್) ಜಿಲ್ಲಾ ಪ್ರಧಾನ ಕಚೇರಿಯಲ್ಲಿ ಸಹಾಯಕ ಪೊಲೀಸ್‌ ಇನ್ಸ್‌ಪೆಕ್ಟರ್‌ (ಎಎಸ್‌ಐ)ಗೃಹರಕ್ಷಕಿಯೊಬ್ಬರ ಕಡೆಯಿಂದ ಬಾಡಿ ಮಸಾಜ್‌ ಮಾಡಿಸಿಕೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಚೇರಿಯ ಆವರಣದಲ್ಲಿರುವ ಕೋಣೆಯೊಂದರಲ್ಲಿ ಎಎಸ್‌ಐ ಹಸನ್‌ ಎಂಬಾತ ಗೃಹರಕ್ಷಕಿ ಕಡೆಯಿಂದ ಬಾಡಿ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಘಟನೆ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ಕಳೆದ ಮೂರು ತಿಂಗಳಿಂದ ಎಎಸ್‌ಐ ಹಸನ್‌ ಮಹಿಳಾ ಸಿಬ್ಬಂದಿಗಳಿಂದ ಮಸಾಜ್‌ ಮಾಡಿಸಿಕೊಳ್ಳುತ್ತಿದ್ದ ಎಂದು ಹೇಳಲಾಗುತ್ತಿದೆ. ವಾರದ ಹಿಂದೆ ಸಿಬ್ಬಂದಿಯೊಬ್ಬರು ಮಸಾಜ್‌ ಮಾಡಿಸಿಕೊಳ್ಳುತ್ತಿರುವುದನ್ನು ಮೊಬೈಲ್‌ನಲ್ಲಿ ಸೆರೆಹಿಡಿದು, ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT