ಬುಧವಾರ, ಮಾರ್ಚ್ 3, 2021
21 °C

‘ಕೆಪಿಎಸ್‌ಸಿ ಹೆಚ್ಚುವರಿ ಆಯ್ಕೆ ಪಟ್ಟಿ ಇಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಕೆಪಿಎಸ್‌ಸಿ ಹೆಚ್ಚುವರಿ ಆಯ್ಕೆ ಪಟ್ಟಿ ಇಲ್ಲ’

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದಿಂದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಡಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲು ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಜೆಡಿಎಸ್‌ನ ಪಿಳ್ಳ ಮುನಿಶಾಮಪ್ಪ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕ ನಾಗರಿಕ ಸೇವಾ ನಿಯಮಗಳು–2006ರ ( ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿ ಮತ್ತು ಆಯ್ಕೆ) ಪ್ರಕಾರ ನೇಮಕ ಮಾಡುವಾಗ ಒಂದು ಬಾರಿ ಹೆಚ್ಚುವರಿ ಪಟ್ಟಿ ಪ್ರಕಟಿಸಲು ಅವಕಾಶ ಇದೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ನಿಯಮಗಳಲ್ಲಿ ಈ ಅವಕಾಶ ಇಲ್ಲ. ಆದರೆ, ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಕೆಲವು ಅಭ್ಯರ್ಥಿಗಳು ಹಂಚಿಕೆಯಾದ ಇಲಾಖೆಯಲ್ಲಿ ವರದಿ ಮಾಡಿಕೊಳ್ಳದೆ ಇದ್ದರೆ, ಆ ಹುದ್ದೆಗಳನ್ನು ಮುಂದಿನ ನೇಮಕಾತಿ ಅವಧಿಯಲ್ಲಿ  ಹೊಸ ಹುದ್ದೆಗಳೆಂದು ಪರಿಗಣಿಸಲಾಗುತ್ತದೆ ಎಂದು ವಿವರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.