ಮುಂದುವರೆದ ಖಾಸಗಿ ವೈದ್ಯರ ಮುಷ್ಕರ

ಬಳ್ಳಾರಿ: ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಹೇರುವ ಮಸೂದೆ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಮುಷ್ಕರವು ನಗರದಲ್ಲಿ ಮಂಗಳವಾರ ಎರಡನೇಯ ದಿನಕ್ಕೆ ಕಾಲಿಟ್ಟಿದೆ.
ಇಲ್ಲಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಗಳು ರೋಗಿಗಳಿಂದ ತುಂಬಿ ತುಳುಕುತ್ತಿತ್ತು. ಖಾಸಗಿ ಆಸ್ಪತ್ರೆಗಳು ಬಂದ್ ಮಾಡಿದ್ದರಿಂದ ಪರದಾಡುವ ಸ್ಥಿತಿ ಮಂಗಳವಾರ ಮುಂದುವರಿಯಿತು.
‘ಖಾಸಗಿ ಆಸ್ಪತ್ರೆಯಲ್ಲಿ ತುರ್ತು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಬೇಡಿಕೆ ಈಡೇರದಿದ್ದರೇ ಮುಷ್ಕರ ಮುಂದುವರಿಯಲಿದೆ. ಬುಧವಾರ ಇಲ್ಲಿನ ಖಾಸಗಿ ಆಸ್ಪತ್ರೆ ವೈದ್ಯರು ಬೆಳಗಾವಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ’ ಎಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಅರುಣಾ ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.