ಬುಧವಾರ, ಮಾರ್ಚ್ 3, 2021
19 °C

ವೈದ್ಯರ ಮುಷ್ಕರದಿಂದಾಗಿ ಸಕಾಲಕ್ಕೆ ಚಿಕಿತ್ಸೆ ಸಿಗದೆ ಬಿಜೆಪಿ ಮುಖಂಡ ಚನ್ನಬಸಪ್ಪ ಹಳ್ಯಾಳ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೈದ್ಯರ ಮುಷ್ಕರದಿಂದಾಗಿ ಸಕಾಲಕ್ಕೆ ಚಿಕಿತ್ಸೆ ಸಿಗದೆ ಬಿಜೆಪಿ ಮುಖಂಡ ಚನ್ನಬಸಪ್ಪ ಹಳ್ಯಾಳ ನಿಧನ

ಹುಬ್ಬಳ್ಳಿ: ವೈದ್ಯರ ಮುಷ್ಕರದಿಂದಾಗಿ ಸಕಾಲಕ್ಕೆ ಚಿಕಿತ್ಸೆ ಲಭಿಸದೆ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಚನ್ನಬಸಪ್ಪ ಹಳ್ಯಾಳ (44) ತೀವ್ರ ಹೃದಯಾಘಾತದಿಂದ ಬುಧವಾರ ಸಂಜೆ ಮೃತಪಟ್ಟಿದ್ದಾರೆ.

ಚನ್ನಬಸಪ್ಪ ಹಳ್ಯಾಳ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ದೇಶಪಾಂಡೆನಗರದ ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ನೀಡಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದರು. ನಂತರ ಕಿಮ್ಸ್‌ಗೆ ಆಸ್ಪತ್ರೆಗೆ ದಾಖಲು ಮಾಡಲು ಕರೆದೊಯ್ಯಲಾಗುತ್ತಿದ್ದಂತೆ ಮಾರ್ಗ ಮಧ್ಯೆ ಕೊನೆಯುಸಿರೆಳೆದರು ಎಂದು ಕುಟುಂಬದವರು ತಿಳಿಸಿದ್ದಾರೆ. 

ಚನ್ನಬಸಪ್ಪ ಹಳ್ಯಾಳ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ. ಕಳೆದ ಹಲವು ದಿನಗಳಿಂದ ಕ್ಯಾನ್ಸರ್‌ನಿಂದಲೂ ಸಹ ಅವರು ಬಳಲುತ್ತಿದ್ದರು ಎನ್ನಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.