ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಾಯ

Last Updated 15 ನವೆಂಬರ್ 2017, 19:46 IST
ಅಕ್ಷರ ಗಾತ್ರ

ಬೆಂಗಳೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ನೇತೃತ್ವದ ಆಯೋಗವು ನೀಡಿರುವ ವರದಿಯನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಇದಕ್ಕೂ ಮುನ್ನ ಬನ್ನಪ್ಪ ಪಾರ್ಕ್‌ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ‍್ಯಾಲಿ ನಡೆಸಿದ ಸಮಿತಿ ಕಾರ್ಯಕರ್ತರು, ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಅಂಗೀಕರಿಸಬೇಕು. ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು
ಪ್ರತಿಭಟನಾಕಾರರು ಒತ್ತಾಯಿಸಿದರು.ರಾಜಕೀಯ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಗದ ವರದಿಯನ್ನು ನಿರ್ಲಕ್ಷಿಸು
ತ್ತಿದ್ದಾರೆ ಎಂದು ಸಮಿತಿಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಆರೋಪಿಸಿದರು.

ತಾರತಮ್ಯ ಸರಿಪಡಿಸಲು ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವರದಿ ನೀಡಲಾಗಿದೆ. ದಲಿತರ ಆರ್ಥಿಕ ಅಭಿವೃದ್ಧಿಗೆ ಮೀಸಲಿರುವ ಎಸ್.ಸಿ, ಎಸ್.ಟಿ.ಪಿ. ಮತ್ತು ಗುತ್ತಿಗೆ ವಿಶೇಷ ಘಟಕ ಯೋಜನೆಯ ಅನುದಾನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT