ನಿರ್ಧಾರದಿಂದ ಹಿಂದೆ ಸರಿಯಲ್ಲ; ನನ್ನ ನಿರ್ಧಾರ ಎಂದೂ ಗಟ್ಟಿಯಾಗಿರುತ್ತದೆ: ರಮೇಶ್ ಕುಮಾರ್

ಬೆಂಗಳೂರು: ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಉತ್ತಮ ಸೇವೆ ಲಭ್ಯವಾಗಬೇಕು. ವೈದ್ಯಕೀಯ ವೃತ್ತಿಯಲ್ಲಿರುವವರಿಗೆ ನೋವಾಗಬಾರದು ಎಂಬುದು ನಮ್ಮ ಆಶಯ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದರು.
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ (ಕೆಪಿಎಂಇ) ವಿರೋಧಿಸಿ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಖಾಸಗಿ ಆಸ್ಪತ್ರೆಗಳ ವೈದ್ಯರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಮತ್ತೊಂದೆಡೆ ಆಸ್ಪತ್ರೆಗಳ ಮುಂದೆ ರೋಗಿಗಳು ಪರದಾಡುತ್ತಿದ್ದಾರೆ. ಹಲವರು ಸೂಕ್ತ ಚಿಕಿತ್ಸೆ ಲಭ್ಯವಾಗದೆ ಮೃತಪಟ್ಟ ಬಗ್ಗೆ ವರದಿಯಾಗುತ್ತಿವೆ.
ಈ ಸಂದರ್ಭದಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಗುರುವಾರ ಮಾತನಾಡಿದ ರಮೇಶ್ ಕುಮಾರ್ ಅವರು, ಖಾಸಗಿ ವೈದ್ಯರು ಮನವಿ ಮಾಡಬಹುದು; ನಿರ್ದೇಶನ ಮಾಡಬಾರದು ಎಂದರು.
ನಾನು(ಸರ್ಕಾರ) ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ. ನನ್ನ ನಿರ್ಧಾರ ಎಂದೂ ಗಟ್ಟಿಯಾಗಿರುತ್ತದೆ. ಸದನದಲ್ಲಿ ನಾವು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.
ಯಾರೂ ಬೇಜವಾಬ್ದಾರಿಯಿಂದ ವರ್ತಿಸಬಾರದು. ನಮ್ಮಿಂದ ತಪ್ಪಾದರೆ ಜನರೇ ಶಿಕ್ಷಿಸುತ್ತಾರೆ. ವೈದ್ಯಕೀಯ ವೃತ್ತಿಯಲ್ಲಿರುವವರಿಗೆ ನೋವಾಗದಂತೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಪ್ರತಿಭಟನೆ ಮಾಡಿ ಕಾನೂನಿನಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಅದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದನದಲ್ಲಿ ಅಂತಿಮ ತೀರ್ಮಾನವಾಗುತ್ತದೆ ಎಂದರು.
ಸರ್ಕಾರ ತನ್ನ ನಿಲುವಿಗೆ ಬದ್ಧವಾಗಿದೆ ಎಂದು ರಮೇಶ್ ಕುಮಾರ್ ಪುನರುಚ್ಚರಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.