ಶುಕ್ರವಾರ, ಫೆಬ್ರವರಿ 26, 2021
30 °C

ಜಾವಡೇಕರ್ ಸಮ್ಮುಖದಲ್ಲಿ ಪ್ರಣಾಳಿಕೆ ಸಮಿತಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಾವಡೇಕರ್ ಸಮ್ಮುಖದಲ್ಲಿ ಪ್ರಣಾಳಿಕೆ ಸಮಿತಿ ಸಭೆ

ಬೆಳಗಾವಿ: ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ ಸಮ್ಮುಖದಲ್ಲಿ ಬಿಜೆಪಿ ಪ್ರಣಾಳಿಕೆ ಸಮಿತಿ ಸಭೆ ಭಾನುವಾರ(ನ.19) ಬೆಂಗಳೂರಿನಲ್ಲಿ ನಡೆಯಲಿದೆ.

ಪ್ರಣಾಳಿಕೆ ಸಿದ್ಧಪಡಿಸಲು ಶಾಸಕ ಎಸ್‌. ಸುರೇಶ್‌ ಕುಮಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈಗಾಗಲೇ ಮೂರು ಬಾರಿ ಸಭೆ ಸೇರಿದ್ದ ಸಮಿತಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದೆ.

ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ಹೊತ್ತಿರುವ ಜಾವಡೇಕರ್, ಸಮಿತಿ ಸದಸ್ಯರ ಅಭಿಪ್ರಾಯ ಆಲಿಸಲು ನಿರ್ಧರಿಸಿದ್ದಾರೆ. ಅಂದಿನ ಸಭೆಯಲ್ಲಿ ಅವರೂ ಸಲಹೆಗಳನ್ನು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.