ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ

6

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ

Published:
Updated:

ಮಾಗಡಿ: ಪಟ್ಟಣದಲ್ಲಿನ ಖಾಸಗಿ ಆಸ್ಪತ್ರೆಗಳೆಲ್ಲವೂ ಬಾಗಿಲು ಮುಚ್ಚಿದ್ದವು ’ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ ವಿರೋಧಿಸಿ ಪಟ್ಟಣದಲ್ಲಿನ ಖಾಸಗಿ ಆಸ್ಪತ್ರೆಗಳನ್ನು ಮುಚ್ಚಿರುವುದರಿಂದ ಸರ್ಕಾರಿ ಆಸ್ಪತ್ರೆಯ ವೈದ್ಯರೆಲ್ಲರೂ ದಿನದ 24 ಗಂಟೆಯೂ ರೋಗಿಗಳ ಸೇವೆಗೆ ನಿರತರಾಗಿದ್ದೇವೆ.

ಸರ್ಕಾರಿ ಆಸ್ಪತ್ರೆಗಗಳಲ್ಲಿನ ಔಷಧಿ ಮಳಿಗೆಗಳನ್ನು ಇಡೀ ದಿನ ತೆರೆದಿದ್ದು ಔಷಧಿ ವಿತರಿಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್‌ ತಿಳಿಸಿದರು.

ವಿದ್ಯುತ್‌: ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಕಡ್ಡದ ನಿರ್ಮಿಸಲು ತಳಪಾಯ ತೆಗೆಯುವಾಗ ವಿದ್ಯುತ್‌ ಕೇಬಲ್‌ ತುಂಡಾದ ಕಾರಣ ಇಡೀ ಆಸ್ಪತ್ರೆಯಲ್ಲಿ ವಿದ್ಯುತ್‌ ಕಡಿತವಾಗಿದೆ. ನೀರಿಗೆ ಪರದಾಟ ಉಂಟಾಗಿದೆ. ಎಕ್ಸ್‌ರೇ ಮತ್ತು ಸ್ಕ್ಯಾನಿಂಗ್‌ ಸ್ಥಗಿತಗೊಳಿಸಲಾಗಿದೆ. ಹೊರಗಿನಿಂದ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ರೋಗಿಗಳು ತಿಳಿಸಿದರು.

ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯಲ್ಲಿ ಇರುವ ನಿಯಂತ್ರಣಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇಲ್ಲ. ಸರ್ಕಾರಿ ಮಸೂದೆಯಲ್ಲಿನ ಅಂಶಗಳ ಬಗ್ಗೆ ಜನತೆಯ ಗಮನಕ್ಕೆ ತರುವುದು ಸೂಕ್ತ ಎಂದು ಹೆಸರು ಹೇಳಲು ಇಚ್ಛಿಸದ ವೈದ್ಯರೊಬ್ಬರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry