7

ಪದವೀಧರ ಕ್ಷೇತ್ರದ ಚುನಾವಣೆ ಮುಂದೂಡಲು ಕಾಂಗ್ರೆಸ್‌ ಮುಖಂಡರ ಮನವಿ

Published:
Updated:
ಪದವೀಧರ ಕ್ಷೇತ್ರದ ಚುನಾವಣೆ ಮುಂದೂಡಲು ಕಾಂಗ್ರೆಸ್‌ ಮುಖಂಡರ ಮನವಿ

ಬಳ್ಳಾರಿ: ವಿಧಾನ ಪರಿಷತ್ತಿಗೆ ಪದವೀಧರ ಕ್ಷೇತ್ರದ ಚುನಾವಣೆಯನ್ನು ಕನಿಷ್ಠ ಮೂರು ತಿಂಗಳು ಮುಂದೂಡಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸ್ಪರ್ಧಾಕಾಂಕ್ಷಿ ಕಾಂಗ್ರೆಸ್ ಮುಖಂಡರಾದ ಎಚ್.ಎಂ.ಮಹೇಶ್ವರಯ್ಯ ಸ್ವಾಮಿ ಹಾಗೂ ಮಹ್ಮದ್ ಗೌಸ್ ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿರುವುದರಿಂದ ಹೊಸ ಪದವೀಧರರ ಸೇರ್ಪಡೆಗೆ ಹೆಚ್ಚಿನ ‌ಕಾಲಾವಕಾಶ ಬೇಕಾಗಿದೆ ಎಂದು‌ ನಗರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಜನವರಿ ಆರಂಭದಲ್ಲೇ ಅಭ್ಯರ್ಥಿಯನ್ನು ಘೋಷಿಸಬೇಕು. ಬಳ್ಳಾರಿಯ ಆಕಾಂಕ್ಷಿಗಳಿಗೆ ಆದ್ಯತೆ ನೀಡಬೇಕು ಎಂದು ಪಕ್ಷದ ಹೈಕಮಾಂಡ್ ಗಮನ ಸೆಳೆಯಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry