7

₹ 5.25 ಕೋಟಿ ವೆಚ್ಚದಲ್ಲಿ ನೂತನ ಪುರಸಭೆ ಕಟ್ಟಡ

Published:
Updated:

ಭಾಲ್ಕಿ: ಪಟ್ಟಣದಲ್ಲಿ ₹ 5.25 ಕೋಟಿ ವೆಚ್ಚದಲ್ಲಿ ನೂತನ ಸುಸಜ್ಜಿತ, ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಪುರಸಭೆ ಕಟ್ಟಡ ತಲೆಯತ್ತಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಇಲ್ಲಿಯ ಪುರಸಭೆ ಕಚೇರಿಗೆ ಶನಿವಾರ ಭೇಟಿ ನೀಡಿ ಮಾತನಾಡಿದರು.

ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಆರಂಭಿಸಬೇಕಿದೆ. ಡಿ.12 ರಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ಶಿಲಾನ್ಯಾಸ ನೆರವೇರಿಸುವರು. ಹಾಗಾಗಿ, ಹಳೇ ಕಟ್ಟಡ ಒಂದು ವಾರ ದೊಳಗೆ ನೆಲಸಮ ಮಾಡಿ ಕಟ್ಟಡ ಕಾಮಗಾರಿ ಆರಂಭಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿ, ಗುತ್ತಿಗೆ ದಾರರಿಗೆ ಸೂಚನೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry