6

‘ಸಂಸ್ಕೃತಿ ಜೀವಂತಿಕೆಗೆ ಸ್ಥಳೀಯ ಭಾಷೆ ಮುಖ್ಯ’

Published:
Updated:

ಕುಶಾಲನಗರ: ಒಂದು ಸಂಸ್ಕೃತಿ ಜೀವಂತ ವಾಗಿರಬೇಕಾದರೆ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವ ಸ್ಥಳೀಯ ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಾನಪದ ವಿದ್ವಾಂಸ ಪ್ರೊ.ಪಿ.ಕೆ.ರಾಜಶೇಖರ್ ಹೇಳಿದರು. ಸಮೀಪದ ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರದ ಕನ್ನಡ ವಿಭಾಗದಿಂದ ಏರ್ಪಡಿಸಿದ್ದ 62ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಪಾಶ್ಚಾತ್ಯ ಭಾಷೆಯ ಪ್ರಭಾವದಿಂದಾಗಿ ನಮ್ಮತನವನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ, ನಮ್ಮ ನಾಡು ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯವನ್ನು ಉಳಿಸಿಕೊಳ್ಳುವ ಅಗತ್ಯತೆ ಇದೆ. ಹೊರ ರಾಜ್ಯಗಳಲ್ಲಿ ಯಾವುದೇ ಧರ್ಮದವರೇ ಆಗಿರಲಿ ಅಲ್ಲಿನ ಸ್ಥಳೀಯ ಭಾಷೆಯನ್ನು ಮಾತನಾಡುತ್ತಾರೆ. ಆದರೆ ಕರ್ನಾಟಕದಲ್ಲಿ ಭಿನ್ನವಾದ ವಾತಾವರಣವಿದೆ ಎಂದರು.

ಬೆಟ್ಟದಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪಿ.ಎಸ್.ರಘು, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಪಿ.ಎಲ್.ಧರ್ಮ ಮಾತನಾಡಿದರು. ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ನೀಡಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry