7

ಹುಳಿಯಾರಿಗೆ ಸಾರಿಗೆ ಸಚಿವ ರೇವಣ್ಣ ಭೇಟಿ

Published:
Updated:

ಹುಳಿಯಾರು: ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಪಟ್ಟಣದ ರೇವಣಸಿದ್ದೇಶ್ವರ ಮಠ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ವೈ.ಸಿ.ಸಿದ್ದರಾಮಯ್ಯ ಅವರ ಮನೆಗೆ ಭಾನುವಾರ ಬಂದಿದ್ದರು.

ಸಿದ್ದರಾಮಯ್ಯ ಅವರ ಮನೆಯಲ್ಲಿ ಕೆಲ ಮುಖಂಡರು ಹುಳಿಯಾರು ಪಟ್ಟಣದ ಬಸ್‌ ನಿಲ್ದಾಣದಲ್ಲಿ ಕೆ.ಎಸ್‌.ಆರ್‌.ಟಿ.ಸಿ. ಉಪ ಕೇಂದ್ರ ತೆರೆಯಲು ಸಹಕಾರ ನೀಡುವಂತೆ ಮನವಿ ಮಾಡಿದರು.

ಹುಳಿಯಾರು ಪಟ್ಟಣದ ಬಸ್ ನಿಲ್ದಾಣಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಬಸ್‌ಗಳು ಬರುತ್ತವೆ. ಅಲ್ಲಿ ಉಪ ಕೇಂದ್ರ (ಟಿಸಿ ಪಾಯಿಂಟ್) ತೆರೆದರೆ ಇನ್ನೂ ಹೆಚ್ಚು ಬಸ್‌ಗಳು ಸಂಚರಿಸಲು ಅನುಕೂಲವಾಗುತ್ತದೆ. ತುರ್ತಾಗಿ ಸ್ಥಳ ಪರಿಶೀಲನೆ ನಡೆಸಿ, ಕಾರ್ಯೋನ್ಮುಖರಾಗುವಂತೆ ಸಚಿವರು ಡಿಪೋ ಮುಖ್ಯಾಧಿಕಾರಿಗಳಿಗೆ ಆದೇಶಿಸಿದರು .

ಜಿಲ್ಲಾ ಪಂಚಾಯಿತಿ ಸದಸ್ಯ ವೈ.ಸಿ.ಸಿದ್ದರಾಮಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎನ್.ರಂಗನಾಥ್, ಕೆಂಕೆರೆ ಪಿಎಸಿಎಸ್ ಅಧ್ಯಕ್ಷ ಕೆ.ಸಿ.ಶಿವಕುಮಾರ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry