6

15 ದಿನದಲ್ಲಿ 10 ಸಾವಿರ ಪ್ರಕರಣ : ಸುಗಮ ಸಂಚಾರಕ್ಕೆ ಜಾಗೃತಿ ಅಭಿಯಾನ

Published:
Updated:

ಬೀದರ್‌: ಜಿಲ್ಲೆಯ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಸುಗಮ ಸಂಚಾರಕ್ಕೆ ಅಭಿಯಾನ ಹಮ್ಮಿಕೊಂಡಿದ್ದು, 15 ದಿನಗಳ ಅವಧಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ 10 ಸಾವಿರ ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ದೇವರಾಜ್ ತಿಳಿಸಿದ್ದಾರೆ.

ಮೊದಲ ಬಾರಿಗೆ ಓಲ್ಡ್‌ಸಿಟಿ, ಮಡಿವಾಳ ವೃತ್ತದಿಂದ ಶಿವನಗರದ ಕ್ಲಾಸಿಕ್ ಧಾಬಾ ರಸ್ತೆಯವರೆಗೆ ಕ್ರಮಬದ್ಧವಾದ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಹರಳಯ್ಯ ವೃತ್ತ, ಕನ್ನಡಾಂಬೆ ವೃತ್ತ, ಅಂಬೇಡ್ಕರ್ ವೃತ್ತಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ದ್ವಿಚಕ್ರ ವಾಹನ ಸವಾರರು ಸುರಕ್ಷತೆಯ ದೃಷ್ಟಿಯಿಂದ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸ ಬೇಕು. ವಾಹನಗಳಿಗೆ ಸಂಬಂಧ ಪಟ್ಟ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಳ್ಳಬೇಕು. ಪೊಲೀಸರು ಪರಿಶೀಲನೆ ನಡೆಸಿದಾಗ ದಾಖಲೆಗಳನ್ನು ತೋರಿಸಬೇಕು ಎಂದು ತಿಳಿಸಿದ್ದಾರೆ.

ದ್ವಿಚಕ್ರ ವಾಹನಗಳ ಮೇಲೆ ಮೂರು ಜನ ಪ್ರಯಾಣಿಸುವುದು ತಪ್ಪು. ಕಾರು ಚಾಲಕರು ಹಾಗೂ ಸವಾರರು ವಾಹನ ಚಲಾಯಿಸುವಾಗ ತಪ್ಪದೇ ಸೀಟ್ ಬೆಲ್ಟ್ ಸಹ ಧರಿಸಬೇಕು. ವಾಹನ ಚಲಾಯಿಸುವಾಗ ಮೊಬೈಲ್‌ನಲ್ಲಿ ಮಾತನಾಡಬಾರದು. ಸುಗಮ ಸಂಚಾರ ಮತ್ತು ವಾಹನ ಸವಾರರ ಸುರಕ್ಷತೆಗಾಗಿ ಪೊಲೀಸರು ನಡೆಸಿರುವ ಅಭಿಯಾನಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry