7

ಅಪಘಾತ: 40 ಮಂದಿಗೆ ಗಾಯ

Published:
Updated:

ಅರಸೀಕೆರೆ: ತಾಲ್ಲೂಕಿನ ಕಸಬಾ ಹೋಬಳಿ ಮೈಲನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭಾನುವಾರ ರಾತ್ರಿ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಚಾಲಕರು ಸೇರಿ 40 ಮಂದಿ ಪ್ರಯಾಣಿಕರು ಗಾಯಗೊಂಡರು.

ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ ಹಾಗೂ ಸಿಮೆಂಟ್‌ ತುಂಬಿಕೊಂಡು ಅರಸೀಕೆರೆಗೆ ಬರುತ್ತಿದ್ದ ಲಾರಿ ನಡುವೆ ಮೈಲನಹಳ್ಳಿ ಬಳಿ ಮೊರಾರ್ಜಿ ವಸತಿ ಶಾಲೆ ಮುಂಭಾಗದ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬಸ್‌ ಭಾಗಶಃ ಹಾಗೂ ಲಾರಿ ಪೂರ್ಣ ಜಖಂಗೊಂಡಿದೆ. ಪ್ರಯಾಣಿಕರು ಸೇರಿ 40ಮಂದಿಗೆ ಪೆಟ್ಟಾಗಿದ್ದು, ಅದೃಷ್ಟವಶಾತ್‌ ಸಾವು ಸಂಭವಿಸಿಲ್ಲ. ಗಾಯಾಳುಗಳನ್ನು ತಿಪಟೂರು ಆಸ್ಪತ್ರೆ, ಅರಸೀಕೆರೆ ಸರ್ಕಾರಿ ಜೆ.ಸಿ. ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry