ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಕ್ಕೆಜೋಳ ಬೆಂಬಲ ಬೆಲೆ ಘೋಷಣೆಗೆ ಒತ್ತಾಯಿಸಿ ಕಾಂಗ್ರೆಸ್‌ ಪ್ರತಿಭಟನೆ

Last Updated 21 ನವೆಂಬರ್ 2017, 9:46 IST
ಅಕ್ಷರ ಗಾತ್ರ

ಶಿಕಾರಿಪುರ: ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಸೋಮವಾರ ಕಾಂಗ್ರೆಸ್‌ ನೇತೃತ್ವದಲ್ಲಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗೋಣಿ ಮಾಲತೇಶ್‌, ‘ಪ್ರಧಾನಿ ನರೇಂದ್ರ ಮೋದಿ ರೈತ ವಿರೋಧಿ ಆಡಳಿತ ನಡೆಸುತ್ತಿದ್ದಾರೆ. ತಾಲ್ಲೂಕಿನಲ್ಲಿ ರೈತರು ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ. ರೈತ ನಾಯಕ ಎಂದು ಹೇಳಿಕೊಳ್ಳುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ತೆರಳಿ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಕೊಡಿಸುವ ಕಾರ್ಯ ಮಾಡಬೇಕು’ ಎಂದರು.

ಉತ್ತಮ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಯಡಿಯೂರಪ್ಪ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ಮುಂದಿನ ಚುನಾವಣೆಯಲ್ಲಿ ಸಂಸದ ಯಡಿಯೂರಪ್ಪ ಹಾಗೂ ಶಾಸಕ ರಾಘವೇಂದ್ರ ಅವರನ್ನು ತಾಲ್ಲೂಕಿನ ಜನತೆ ಸೋಲಿಸಿ ಮನೆಗೆ ಕಳುಹಿಸುತ್ತಾರೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡವರಲ್ಲಿ ಒಬ್ಬರು ಈ ಕ್ಷೇತ್ರದ ಶಾಸಕರಾಗುತ್ತಾರೆ ಎಂದರು.

ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್‌.ಪಿ.ನರಸಿಂಗನಾಯ್ಕ ಮಾತನಾಡಿ, ‘ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನಿಗದಿ ಮಾಡಿಲ್ಲ. ಆದರೆ, ಬೆಂಬಲ ಬೆಲೆ ನಿಗದಿ ಮಾಡಿದೆ ಎಂದು ಶಾಸಕ ರಾಘವೇಂದ್ರ ಸುಳ್ಳು ಹೇಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಡಳಿತದಿಂದ ವರ್ತಕರಿಗೆ ಹಾಗೂ ರೈತರಿಗೆ ಅನ್ಯಾಯವಾಗಿದೆ. ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಮಾಣ ಮಾಡಿಸಿದ್ದಾರೆ’ ಎಂದರು.

ಮುಖಂಡರಾದ ಈಸೂರು ಜಯಣ್ಣ, ಹುಲ್ಮಾರ್ ಮಹೇಶ್‌, ಮತ್ತಿಕೋಟಿ ರವಿ, ಹಳ್ಳೂರು ಪರಮೇಶ್ವರಪ್ಪ, ಭಂಡಾರಿ ಮಾಲತೇಶ್‌, ನಗರದ ರವಿಕಿರಣ್‌, ಗಾಮ ದಯಾನಂದ್‌, ಮಧು, ಬಡಗಿ ಪಾಲಾಕ್ಷ, ತಟ್ಟೀಹಳ್ಳಿ ಸಂಗಮೇಶ್‌, ಮಯೂರ್‌ದರ್ಶನ್‌, ಸುರೇಶ್‌ ಧಾರಾವಾಡ, ಜೀನಳ್ಳಿ ದೊಡ್ಡಪ್ಪ, ಗೋಣಿ ಸಂದೀಪ್‌, ರೇಣುಕಾಸ್ವಾಮಿ, ಹೊಳಗಿ ಮಾಲತೇಶ್‌ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT