7

ಹಾಸನದಲ್ಲಿ ಬಸ್‍ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

Published:
Updated:
ಹಾಸನದಲ್ಲಿ ಬಸ್‍ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

ಹಾಸನ : ತಾಂತ್ರಿಕ ದೋಷದಿಂದ ಬಸ್‌ಗೆ ಬೆಂಕಿ ತಗುಲಿ ಸುಟ್ಟು ಹೋಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಂಚಟಹಳ್ಳಿ ಗ್ರಾಮದ ಬಳಿ ಅವಘಡ ಸಂಭವಿಸಿದೆ.

30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು.

ದುರ್ಗಾಂಬ ಟ್ರಾನ್ಸ್‌ಪೋರ್ಟ್‌ಗೆ ಸೇರಿದ ಸ್ಲೀಪರ್ ಕೋಚ್ ಬಸ್ ಇದಾಗಿದ್ದು ಮಂಗಳೂರು ಕಡೆಯಿಂದ ಬೆಂಗಳೂರಿಗೆ ತೆರಳುತಿತ್ತು. ಚಾಲಕ ತಕ್ಷಣ ಬಸ್ ಪಕ್ಕಕ್ಕೆ ನಿಲ್ಲಿಸಿದ್ದರಿಂದ ಯಾವುದೇ ಪ್ರಾಣಾಪಾಯ ಆಗಿಲ್ಲ.ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.ಹಾಸನ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry