ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್‌–ಬಿಜೆಪಿ ಕಾರ್ಯಕರ್ತರ ಮುಖಾಮುಖಿ

Last Updated 24 ನವೆಂಬರ್ 2017, 9:08 IST
ಅಕ್ಷರ ಗಾತ್ರ
ADVERTISEMENT

ಧಾರವಾಡ: ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ ಕುಲಕರ್ಣಿ ಕೈವಾಡವಿದ್ದು, ಸತ್ಯ ಹೊರಬರಬೇಕಾದರೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ವಿನಯ ಕುಲಕರ್ಣಿ ಅವರಿಂದ ರಾಜೀನಾಮೆ ಪಡೆಯಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಯೋಗೀಶ್ ಗೌಡ ಪತ್ನಿ ಮಲ್ಲಮ್ಮ ಆಸ್ಪತ್ರೆಯಿಂದ ಪ್ರತಿಭಟನಾ ಸ್ಥಳಕ್ಕೆ ನೇರವಾಗಿ ಬಂದು ಭಾಗವಹಿಸಿದರು.

ಇದೇ ವೇಳೆ ಸ್ಥಳಕ್ಕಾಗಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯ ಕಾಂಪೌಂಡ್‌ ಹೊರಗಿನಿಂದ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರೂ ಪ್ರತಿಭಟಿಸಿದರು. ಇದರಿಂದಾಗಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಎರಡೂ ಪಕ್ಷದವರ ಮನವೊಲಿಸಲು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಹರಸಾಹಸ ಪಟ್ಟರು.

ಸದ್ಯ ಡಿಸಿಪಿ ರೇಣುಕ ಸುಖಮಾರ್ ನೇತೃತ್ವದ ಪೊಲೀಸ್ ಬಂದೋಬಸ್ತ್‌ ಒದಗಿಸಲಾಗಿದ್ದು, ಎರಡೂ ಪಕ್ಷದ ಕಾರ‌ಯಕರ್ತರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT