ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶೌಚಾಲಯ ಕಾಮಗಾರಿ ಪೂರ್ಣಗೊಳಿಸಿ’

Last Updated 24 ನವೆಂಬರ್ 2017, 8:58 IST
ಅಕ್ಷರ ಗಾತ್ರ

ಯಾದಗಿರಿ: ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಯಾದಗಿರಿ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ₹1 ಕೋಟಿ ಮಂಜೂರು ಮಾಡಿದೆ.

ಶಾಸಕ ಡಾ.ಎ.ಬಿ.ಮಾಲಕರಡ್ಡಿ ಅವರು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ತನ್ವೀರ್‌ಸೇಠ್ ಅವರಿಗೆ ಸಲ್ಲಿಸಿದ ಪ್ರಸ್ತಾವದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಅಕ್ರಂ ಭಾಷಾ ಆದೇಶ ಹೊರಡಿಸಿದ್ದಾರೆ.

ಸರ್ಕಾರ ಅಲ್ಪಸಂಖ್ಯಾತರ ಕಾಲೊನಿಗಳ ಅಭಿವೃದ್ಧಿಗಾಗಿ ₹800 ಕೋಟಿ ಕ್ರಿಯಾಯೋಜನೆ ಘೋಷಿಸಿದ್ದು, 2017–18ನೇ ಸಾಲಿನ ಆಯವ್ಯಯದಲ್ಲಿ ₹400 ಕೋಟಿ ಒದಗಿಸಿದೆ.

‘₹1 ಕೋಟಿ ಅನುದಾನದಲ್ಲಿ ಈಗಾಗಲೇ ₹50 ಲಕ್ಷ ಬಿಡುಗಡೆ ಮಾಡಿದೆ. ಆಯಾ ವಿಧಾನಸಭಾ ಕ್ಷೇತ್ರದ ಸದಸ್ಯರಿಂದ ಕಾಮಗಾರಿಗಳ ಪ್ರಸ್ತಾವ ಪಡೆದು ಯೋಜನೆ ಅನುಷ್ಠಾನ ಮಾಡಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ದೇಶಕರು ಪ್ರಕಟಿಸಿದ್ದಾರೆ’ ಎಂದು ಶಾಸಕ ಡಾ.ಎ.ಬಿ.ಮಾಲಕರಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT