7

ಕಮಕನೂರ ಹೆಸರು ಶಿಫಾರಸಿಗೆ ನಿರ್ಣಯ: ಜಮಾದಾರ ಖಂಡನೆ

Published:
Updated:

ಬೀದರ್: ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಈಚೆಗೆ ನಡೆದ ಸಭೆಯಲ್ಲಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ತಿಪ್ಪಣ್ಣಪ್ಪ ಕಮಕನೂರ ಹೆಸರು ಶಿಫಾರಸು ಮಾಡಲು ನಿರ್ಣಯ ಕೈಗೊಂಡಿರುವುದನ್ನು ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘದ ಅಧ್ಯಕ್ಷ ಜಗನ್ನಾಥ ಜಮಾದಾರ ಖಂಡಿಸಿದ್ದಾರೆ.

ಟೋಕರೆ ಕೋಳಿ ಸಮಾಜದ ಚಿತ್ತಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಹಣಮಂತ ಸಂಕನೂರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಲವೇ ಜನ ಪಾಲ್ಗೊಂಡಿದ್ದರು. ಸಭೆಯಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಕಲಬುರ್ಗಿ ಜಿಲ್ಲೆಯವರಿಗೆ ಪ್ರಾತಿನಿಧ್ಯ ಕೊಡಲಾಗಿದೆ. ಬೀದರ್ ಜಿಲ್ಲೆಯಲ್ಲಿ ಸಮಾಜದವರ ಜನಸಂಖ್ಯೆ 1.75 ಲಕ್ಷಕ್ಕೂ ಅಧಿಕ ಇದೆ. ಹೀಗಾಗಿ ಜಿಲ್ಲೆಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಜಮಾದಾರ ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry