ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಸಮ್ಮೇಳನಕ್ಕೆ ಬೆದರಿಕೆ

Last Updated 25 ನವೆಂಬರ್ 2017, 8:53 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದ ಸಭಾಂಗಣವನ್ನು ಸ್ಫೋಟಿಸುವ ಬೆದರಿಕೆಯ ಅನಾಮಧೇಯ ಪತ್ರವೊಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ (ಡಿಡಿಪಿಐ) ಕಚೇರಿಗೆ ಬಂದಿದೆ.

‘ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತ್ಯ ಹಾಗೂ ಮುಸ್ಲಿಂ ಶಿಕ್ಷಕರನ್ನು ಕಡೆಗಣಿಸಲಾಗಿದೆ. ಇದು ತೀರಾ ಖಂಡನೀಯ’ ಎಂದು ಪತ್ರದಲ್ಲಿ ನಮೂದಿಸಲಾಗಿದೆ. ಪತ್ರವನ್ನು ಕಡೆಗಣಿಸದಂತೆ ಎಚ್ಚರಿಕೆಯ ಕರೆ ಕೂಡ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮೂರು ದಿನಗಳ ಹಿಂದೆ ಬಂದಿರುವ ಬೆದರಿಕೆ ಪತ್ರವನ್ನು ಡಿಡಿಪಿಐ ಮಂಜುಳಾ ಅವರು ಪೊಲೀಸ್‌ ಕಮಿಷನರ್‌ ಡಾ.ಎ.ಸುಬ್ರಮಣ್ಯೇಶ್ವರ ರಾವ್‌ ಅವರಿಗೆ ರವಾನಿಸಿದ್ದಾರೆ. ಈ ಸಂಬಂಧ ಮೈದಾನಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT