ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಸಮ್ಮೇಳನಕ್ಕೆ ಬೆದರಿಕೆ

Last Updated 25 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಮೈಸೂರು: ಸಾಹಿತ್ಯ ಸಮ್ಮೇಳನ ಸಭಾಂಗಣಕ್ಕೆ ಬಾಂಬ್‌ ಹಾಕುವುದಾಗಿ ಅನಾಮಧೇಯ ಬೆದರಿಕೆ ಪತ್ರವೊಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ (ಡಿಡಿಪಿಐ) ಕಚೇರಿಗೆ ಬಂದಿದೆ.

ನ. 23ರಂದು ಚಾಮರಾಜಮೊಹಲ್ಲಾದ ಕಚೇರಿ ತಲುಪಿದ ಇನ್‌ಲ್ಯಾಂಡ್‌ ಪತ್ರವನ್ನು ಡಿಡಿಪಿಐ ಮಂಜುಳಾ ಅವರು ಪೊಲೀಸ್ ಕಮಿಷನರ್‌ಗೆ ಹಸ್ತಾಂತರಿಸಿದ್ದಾರೆ.

‘ಇಸ್ಲಾಂ ಮತ್ತು ಮಹಮ್ಮದ್‌ ಪೈಗಂಬರ್‌ ಅವರನ್ನು ಅವಹೇಳನ ಮಾಡಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ರಕ್ತಪಾತ ಹರಿಸಲು ಸಿದ್ಧತೆ ನಡೆಯುತ್ತಿದೆ’ ಎಂದು ಕನ್ನಡದಲ್ಲಿರುವ ಪತ್ರದಲ್ಲಿ ನಮೂದಿಸಲಾಗಿದೆ. ಸಮ್ಮೇಳನಕ್ಕೆ ಮುಸ್ಲಿಂ ಶಿಕ್ಷಕರನ್ನು ತೊಡಗಿಸಿಕೊಳ್ಳುವಂತೆಯೂ ಸಲಹೆ ನೀಡಲಾಗಿದೆ.

‘ಇದು ಕಿಡಿಗೇಡಿಗಳ ಕೃತ್ಯ. ಇದಕ್ಕೆ ಭಯಪಡುವ ಅಗತ್ಯವೂ ಇಲ್ಲ’ ಎಂದು ಪೊಲೀಸ್‌ ಕಮಿಷನರ್‌ ಡಾ.ಎ.ಸುಬ್ರಮಣ್ಯೇಶ್ವರ ರಾವ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT