ವೀರ-ವಿಕ್ರಮ ಕಂಬಳಕ್ಕೆ ಸಂಭ್ರಮದ ಚಾಲನೆ

7

ವೀರ-ವಿಕ್ರಮ ಕಂಬಳಕ್ಕೆ ಸಂಭ್ರಮದ ಚಾಲನೆ

Published:
Updated:
ವೀರ-ವಿಕ್ರಮ ಕಂಬಳಕ್ಕೆ ಸಂಭ್ರಮದ ಚಾಲನೆ

ಬಂಟ್ವಾಳ: ‘ ಪೆಟಾ ಸಂಸ್ಥೆಯ ಅನಗತ್ಯ ಆಕ್ಷೇಪಗಳ ನಡುವೆಯೂ ಕಂಬಳ ಉಳಿಸುವ ಮಹತ್ತರ ಹೊಣೆಗಾರಿಗೆ ನಮ್ಮೆಲ್ಲರ ಮೇಲಿದೆ’ ಎಂದು ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ ಹೇಳಿದರು.

'ದೇವರ ಕಂಬಳ' ಎಂದೇ ಪ್ರತೀತಿ ಹೊಂದಿರುವ ಹೊಕ್ಕಾಡಿಗೋಳಿಯಲ್ಲಿ ಶನಿವಾರ ಬೆಳಿಗ್ಗೆ ಆರಂಭಗೊಂಡ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಪ್ರಾಸ್ತಾವಿಕ ಮಾತನಾಡಿದರು.

‘ಅಹಿಂಸಾತ್ಮಕ ಮತ್ತು ಶಿಸ್ತುಬದ್ಧ ಕಂಬಳ ನಡೆಸಲು ಅನುಕೂಲವಾಗುವಂತೆ ಜಿಲ್ಲಾ ಕಂಬಳ ಸಮಿತಿಯು ಜಿಲ್ಲೆಯ ಪ್ರತೀ ಕಂಬಳ ಸಮಿತಿಗಳಿಗೆ ಹಲವು ಸೂಚನೆ ನೀಡಿದೆ’ ಎಂದರು.

ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಿ ಮಾತನಾಡಿ, ‘ದೇಶದಲ್ಲಿ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ 'ದೇವರ ಕಂಬಳ' ಎಂಬ ನೆಲೆಯಲ್ಲಿ ವಿಶೇಷ ಗೌರವವಿದೆ’ ಎಂದು ಅವರು ಹೇಳಿದರು.

ಪೂಂಜ ಕ್ಷೇತ್ರದ ಪ್ರಧಾನ ಅರ್ಚಕ ಪಿ.ಅನಂತ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲಿಯನಡುಗೋಡು ಮುಜಿಲ್ನಾಯ ಟ್ರಸ್ಟ್ನ ಗೌರವಾಧ್ಯಕ್ಷ ಮೂಡಬಿದಿರೆ ಚೌಟರ ಅರಮನೆ ಕುಲದೀಪ್ ಎಂ., ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಕೆ.ರತ್ನಕುಮಾರ್ ಚೌಟ ಶುಭ ಹಾರೈಸಿದರು.

ಆರಂಬೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭಾಕರ ಹುಲಿಮೇರು, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಸುಂದರ ಶಾಂತಿ, ಕಂಬಳ ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಪ್ರಧಾನ ಕಾರ್ಯದರ್ಶಿ ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಕಾರ್ಯರ್ಶಿ ಸಂದೇಶ ಶೆಟ್ಟಿ ಪೊಡುಂಬ, ಕೋಶಾಧಿಕಾರಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜತೆ ಕಾರ್ಯದರ್ಶಿ ಪುಷ್ಪರಾಜ ಜೈನ್, ಉಪಾಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ರಾಜೇಶ್ ಶೆಟ್ಟಿ ಕೊನೆರೊಟ್ಟು, ಪ್ರಣೀತ್ ಹಿಂಗಾಣಿ, ಹರೀಶ್ ಹಿಂಗಾಣಿ, ರಾಜೇಶ್ ಶೆಟ್ಟಿ ಸಿದ್ಧಕಟ್ಟೆ, ಜನಾರ್ದನ ನಾಯ್ಕ್ ಕರ್ಪಿ, ಆನಂದ ಶೆಟ್ಟಿ ತಿರುಮಲೆ ಕೋಡಿ, ಶಶಿಧರ ಶೆಟ್ಟಿ ಕಲ್ಲಾಪು, ನಿತ್ಯಾನಂದ ಪೂಜಾರಿ ಕೆಂತಲೆ, ಬೇಬಿ ಶೆಟ್ಟಿ ಕಲಾಯಿದಡ್ಡ, ರಘುರಾಮ ಶೆಟ್ಟಿ ದೇವಸ್ಯ, ಭುಜಂಗ ಶೆಟ್ಟಿ ಹೊಕ್ಕಾಡಿಗೋಳಿ, ನವೀನ್ ಕುಂಜಾಡಿ, ಲೋಕನಾಥ ಶೆಟ್ಟಿ ಪಮುಂಜ, ಎಚ್.ಎ. ರಹಮಾನ್, ಸ್ಥಳದಾನಿಗಳಾದ ಸುಧಾಕರ ಚೌಟ ಬಾವ ಹೊಸಬೆಟ್ಟು, ಸುಧೀರ್ ಶೆಟ್ಟಿ ಹೊಕ್ಕಾಡಿಗೋಳಿ, ಲಲಿತ ಗುಮ್ಮಣ್ಣ ಶೆಟ್ಟಿ , ಪ್ರವೀಣ್ ಕುಲಾಲ್, ಹರೀಶ್ ಶೆಟ್ಟಿ ಮತ್ತಿತರರು ಕಾರ್ಯಕ್ರಮದಲ್ಲಿ ಇದ್ದರು. ಸಮಿತಿ ಗೌರವ ಸಲಹೆಗಾರ ನೋಟರಿ ವಕೀಲ ಸುರೇಶ ಶೆಟ್ಟಿ ಸ್ವಾಗತಿಸಿದರು. ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ವಂದಿಸಿದರು.

ವಿಶೇಷತೆ: ಕಂಬಳ ಕರೆಗೆ ಓಟದ ಕೋಣಗಳು ಇಳಿಯುವ ವೇಳೆ ಕೋಣಗಳ ಮಾಲಿಕರಿಗೆ ವೀಳ್ಯದೆಲೆ ಮತ್ತು ಅಡಿಕೆ ನೀಡಿ ಕಂಬಳ ಸಮಿತಿ ಪದಾಧಿಕಾರಿಗಳು ಸ್ವಾಗತಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry