7

ಅಧಿಕಾರ ಎಂದಿಗೂ ಶಾಶ್ವತವಲ್ಲ :ಸಚಿವ ಲಮಾಣಿ

Published:
Updated:

ಗುತ್ತಲ: ‘ಚುನಾಯಿತ ಪ್ರತಿನಿಧಿಗಳಿಗೆ ಅಧಿಕಾರ ಎಂದಿಗೂ ಶಾಶ್ವತವಲ್ಲ. ಆದರೆ, ಅವರು ಅಧಿಕಾರದಲ್ಲಿದ್ದಾಗ ಮಾಡುವ ಅಭಿವೃದ್ಧಿ ಕಾರ್ಯಗಳು ಮಾತ್ರ ಶಾಶ್ವತ’ ಎಂದು ಜಿಲ್ಲಾ ಉಸ್ತು ವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು. ಸಮೀಪದ ಹಾವನೂರ ಗ್ರಾಮದ ಚಿಕ್ಕಮೈಲಾರಲಿಂಗೇಶ್ವರ ದೇವಸ್ಥಾನ ದಲ್ಲಿ ಶುಕ್ರವಾರ ನಡೆದ ರಥೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಮಾಜಿ ಶಾಸಕ ನೆಹರು ಓಲೇಕಾರ ಮತ್ತು ನಮ್ಮ ಸಂಬಂಧ ಉತ್ತಮವಾಗಿಯೇ ಇದೆ. ಆದರೆ, ಕಾರ್ಯಕರ್ತರು ಕಾಂಗ್ರೆಸ್‌, ಬಿಜೆಪಿ ಎಂದು ಕಿತ್ತಾಡಿ ಪೊಲೀಸ್‌ ಠಾಣೆ ಮೆಟ್ಟಿಲೇರಿ ನ್ಯಾಯಾಲಕ್ಕೆ ಅಲೆದಾಬೇಡಿ’ ಎಂದರು.

‘ಮಾಜಿ ಶಾಸಕ ನೆಹರು ಓಲೇಕಾರ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಸಚಿವರು ಇನ್ನಷ್ಟು ಅನುದಾನವನ್ನು ಬಿಡುಗಡೆಗೊಳಿಸಿ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಬೇಕು’ ಎಂದರು. ಬಾಳೇಹೊಸೂರ ದಿಂಗಾಳೇಶ್ವರ ಸ್ವಾಮೀಜಿ, ಹಾವನೂರ ಶಿವಕುಮಾರ ಸ್ವಾಮೀಜಿ ಹಾಗೂ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ ಮಾತನಾಡಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಯಲ್ಲಪ್ಪ ಮಣ್ಣೂರ, ಕೃಷಿ ಉತ್ಪನ ಮಾರುಕಟ್ಟೆ ಸಮಿತಿ ಸದಸ್ಯ ಗೌಡಪ್ಪಗೌಡ ಪಾಟೀಲ, ಉಮೇಶ ಮಾಗಳ, ಮಾರುತಿ ಗೊರವರ, ಮುತ್ತಣ್ಣ ಎಲಿಗಾರ, ಅಬ್ದುಲ್‌ಖಾದರ್‌ ಸುಬೇದಾರ್‌, ಸುನೀಲ ಕೆಂಗನಿಂಗಪ್ಪನವರ, ಪಟ್ಟಣ ಪಂಚಾಯ್ತಿ ಸದಸ್ಯ ಹಸ್ಮತಬಿ ರಿತ್ತಿ, ಆಶ್ರಯ ಕಮಿಟಿ ಅಧ್ಯಕ್ಷ ಸಹಜಾನ್‌ಸಾಬ್‌ ಅಗಡಿ ಹುಲ್ಲತ್ತಿ ಮಾಲಿಂಗ ಸ್ವಾಮೀಜಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry