7

ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಖಚಿತ

Published:
Updated:

ಹೊನ್ನಾಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹಮ್ಮಿಕೊಂಡಿರುವ ದೂರದೃಷ್ಠಿ ಚಿಂತನೆಗಳಿಂದಾಗಿ ಮುಂದಿನ ದಿನಗಳಲ್ಲಿ ದೇಶದ ಜನತೆಗೆ ಒಳ್ಳೆಯದಾಗಲಿದೆ ಎಂದು ಬೀದರ್ ಸಂಸದ ಭಗವಂತ ಖುಬಾ ಹೇಳಿದರು. ಶನಿವಾರ ಉಡುಪಿಯಿಂದ ಬೀದರ್ ಗೆ ಹಿಂದಿರುಗುವ ಮಾರ್ಗ ಮಧ್ಯದಲ್ಲಿ ಇಲ್ಲಿನ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿನ ಬಿಜೆಪಿ ಪರಿವರ್ತನಾ ಯಾತ್ರೆಗೆ ಸಾಕಷ್ಟು ಜನರ ಬೆಂಬಲ ಸಿಕ್ಕಿದೆ. ಯಾತ್ರೆ ಯಶಸ್ಸು ಕಂಡಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದರು. ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಪರಿಶ್ರಮ ಹಾಕಬೇಕು. ರೇಣುಕಾಚಾರ್ಯರನ್ನು ಗೆಲ್ಲಿಸಲು ಪಣ ತೊಡಬೇಕು ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಡಿ.ಜಿ.ರಾಜಪ್ಪ ಅವರು ಸಂಸದರನ್ನು ಅಭಿನಂದಿಸಿದರು. ಜಿ.ಪಂ.ಸದಸ್ಯ ಸುರೇಂದ್ರನಾಯ್ಕ, ಮಹೇಶ್, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಶಿವಾನಂದ್, ಸದಸ್ಯ ಸಿದ್ದಲಿಂಗಪ್ಪ, ರವಿಕುಮಾರ್, ಎಪಿಎಂಸಿ ಸದಸ್ಯ ರಾಜು, ಸುರೇಶ್, ಗಣೇಶಪ್ಪ, ಮುಖಂಡ ಫಾಲಾಕ್ಷಪ್ಪ, ಕನಕದಾಸ, ಪ್ರಭುಗೌಡ, ಚಿನ್ನಪ್ಪ, ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry